
ತಮ್ಮ ಮುಂಬರುವ ಸಿನಿಮಾಗಾಗಿ ಲಾಸ್ ಏಂಜಲೀಸ್ನಲ್ಲಿ ಶೂಟಿಂಗ್ನಲ್ಲಿ ಭಾಗಿಯಾಗಿದ್ದ ಸಂದರ್ಭದಲ್ಲಿ ನಟ ಶಾರೂಕ್ ಖಾನ್ ಈ ಅಪಘಾತಕ್ಕೆ ಒಳಗಾಗಿದ್ದಾರೆ ಎಂದು ಮೂಲಗಳು ಹೇಳಿವೆ.
ಮಾಧ್ಯಮಗಳ ವರದಿ ಪ್ರಕಾರ ಶಾರೂಕ್ ಖಾನ್ ಮೂಗಿಗೆ ಸಣ್ಣ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. ಹಾಗೂ ಅವರು ಭಾರತಕ್ಕೆ ಮರಳಿದ್ದಾರೆ ಎಂದು ತಿಳಿದು ಬಂದಿದೆ. ಶಾರೂಕ್ಖಾನ್ ತಮ್ಮ ಮುಂದಿನ ಸಿನಿಮಾ ಪ್ರಾಜೆಕ್ಟ್ಗಾಗಿ ಲಾಸ್ ಏಂಜಲೀಸ್ನಲ್ಲಿ ಶೂಟಿಂಗ್ ನಡೆಸುತ್ತಿದ್ದರು. ಈ ವೇಳೆ ಅವರ ಮೂಗಿಗೆ ಬಲವಾಗಿ ಪೆಟ್ಟಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ರಕ್ತಸ್ರಾವವನ್ನು ನಿಲ್ಲಿಸಲು ಕಿಂಗ್ ಖಾನ್ ಗೆ ಸಣ್ಣ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.
ಪಠಾಣ್ ಸಿನಿಮಾದ ಅಭೂತಪೂರ್ವ ಯಶಸ್ಸಿನ ಬಳಿಕ ಇದೀಗ ಶಾರೂಕ್ ಖಾನ್ ಜವಾನ್ ಸಿನಿಮಾದ ಮೂಲಕ ಮತ್ತೊಮ್ಮೆ ಅದೃಷ್ಟ ಪರೀಕ್ಷೆಗೆ ಸಿದ್ಧರಾಗುತ್ತಿದ್ದಾರೆ. ಜುಲೈ 12ರಂದು ಥಿಯೇಟರ್ಗಳಲ್ಲಿ ಟಾಮ್ ಕ್ರೂಸ್ ಅಭಿನಯದ ಮಿಷನ್ ಇಂಪಾಸಿಬಲ್ ಸಿನಿಮಾ ಬಿಡುಗಡೆಯಾಗುತ್ತಿದೆ. ಇದೇ ವೇಳೆ ಬಹುನಿರೀಕ್ಷಿತ ಜವಾನ್ ಸಿನಿಮಾದ ಟ್ರೈಲರ್ ಕೂಡ ರಿಲೀಸ್ ಆಗಲಿದೆ ಎನ್ನಲಾಗಿದೆ.

