HomeKarnatakaBIG NEWS: ಚುನಾವಣೆಯಲ್ಲಿ ಕಡಿಮೆ ನಂಬರ್ ಬಂದಿರುವ ಬೇಸರದಲ್ಲಿ ಏನೇನೋ ಮಾತನಾಡುತ್ತಿದ್ದಾರೆ : HDK ಗೆ...

BIG NEWS: ಚುನಾವಣೆಯಲ್ಲಿ ಕಡಿಮೆ ನಂಬರ್ ಬಂದಿರುವ ಬೇಸರದಲ್ಲಿ ಏನೇನೋ ಮಾತನಾಡುತ್ತಿದ್ದಾರೆ : HDK ಗೆ ಟಾಂಗ್ ನೀಡಿದ ಡಿಸಿಎಂ

ಬೆಂಗಳೂರು: ಸಿಎಂ ಗೃಹ ಕಚೇರಿಯಲ್ಲಿಯೇ ಭ್ರಷ್ಟಾಚಾರ ಎಂಬ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆರೋಪಕ್ಕೆ ತಿರುಗೇಟು ನೀಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಕುಮಾರಸ್ವಾಮಿ ಬಳಿ ದಾಖಲೆ ಇದ್ದರೆ ಲೋಕಾಯುಕ್ತಕ್ಕೆ ದೂರು ನೀಡಲಿ ಎಂದಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಕುಮಾರಸ್ವಾಮಿಯವರು ಚುನಾವಣೆಯಲ್ಲಿ ಕಡಿಮೆ ನಂಬರ್ ಬಂದಿರುವ ಬೇಸರದಲ್ಲಿ ಏನೇನೋ ಮಾತನಾಡುತ್ತಿದ್ದಾರೆ. ಹೀಗಾಗಿ ಅವರ ಮಾತುಗಳ ಬಗ್ಗೆ ತಲೆ ಕೆಡಿಸಿಕೊಳ್ಳಬೇಕಿಲ್ಲ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅವರ ಆರೋಪ ಸತ್ಯಕ್ಕೆ ದೂರವಾದದ್ದು. ಸರ್ಕಾರದ ಯಾವುದೇ ಕಚೇರಿಯಲ್ಲಿ ಹಣ ಪಡೆದು ಕೆಲಸ ನೀಡಲಾಗುತ್ತಿಲ್ಲ. ಕುಮಾರಸ್ವಾಮಿ ಬಳಿ ದಾಖಲೆ ಇದ್ದರೆ ಲೋಕಾಯುಕ್ತಕ್ಕೆ ದೂರು ನೀಡಲಿ. ತನಿಖೆ ಮಾಡಿಸಲಿ ಎಂದು ಹೇಳಿದರು.

 

For Latest News Updates, Join Our Whatsapp Community🚩
RELATED ARTICLES

Most Popular