ಕಂಟೈನರ್ ಲಾರಿಯೊಂದು ಮೊದಲು ನಾಲ್ಕು ವಾಹನಗಳಿಗೆ ಡಿಕ್ಕಿ ಹೊಡೆದು ನಂತರ ಹೈವೇಯಲ್ಲಿರುವ ಹೋಟೆಲ್ ಗೆ ಟ್ರಕ್ ನುಗ್ಗಿದ ಪರಿಣಾಮ ಕನಿಷ್ಠ 15 ಜನರು ಮೃತಪಟ್ಟು, 20 ಜನರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಧುಲೆಯಲ್ಲಿ ನಡೆದಿದೆ.
ರಾಜ್ಯ ರಾಜಧಾನಿಯಿಂದ ಸುಮಾರು 300 ಕಿ.ಮೀ ದೂರದಲ್ಲಿರುವ ಧುಲೆ ಜಿಲ್ಲೆಯ ಮುಂಬೈ-ಆಗ್ರಾ ಹೆದ್ದಾರಿಯ ಪಲಸ್ನರ್ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮೂಲಗಳ ಪ್ರಕಾರ, ಕಂಟೈನರ್ ಮೊದಲು ನಾಲ್ಕು ವಾಹನಗಳಿಗೆ ಡಿಕ್ಕಿ ಹೊಡೆದಿದೆ ಮತ್ತು ನಂತರ ಹೋಟೆಲ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕನಿಷ್ಠ 15 ಜನರು ಸಾವನ್ನಪ್ಪಿದ್ದಾರೆ ಮತ್ತು 20 ಜನರು ಗಾಯಗೊಂಡಿದ್ದಾರೆ.
ಟ್ರಕ್ ಬ್ರೇಕ್ ವಿಫಲವಾದ ಹಿನ್ನೆಲೆ ಚಾಲಕ ನಿಯಂತ್ರಣವನ್ನು ಕಳೆದುಕೊಂಡಿದ್ದಾನೆ. ಹಿಂದಿನಿಂದ ಎರಡು ಮೋಟಾರ್ ಸೈಕಲ್ ಗಳು, ಒಂದು ಕಾರು ಮತ್ತು ಮತ್ತೊಂದು ಕಂಟೇನರ್ ಗೆ ಡಿಕ್ಕಿ ಹೊಡೆದಿದೆ. ನಂತರ ಟ್ರಕ್ ಹೆದ್ದಾರಿಯ ಬಸ್ ನಿಲ್ದಾಣದ ಬಳಿಯ ಹೋಟೆಲ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ ಮೃತಪಟ್ಟವರಲ್ಲಿ ಕೆಲವರು ನಿಲ್ದಾಣದಲ್ಲಿ ಬಸ್ ಗಾಗಿ ಕಾಯುತ್ತಿದ್ದರು . ಗಾಯಗೊಂಡವರನ್ನು ಶಿರ್ಪುರ್ ಮತ್ತು ಧುಲೆಯ ಆಸ್ಪತ್ರೆಗಳಿಗೆ ಸಾಗಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.