HomeKarnatakaBIG NEWS: ವಿಪಕ್ಷ ನಾಯಕರ ಆಯ್ಕೆ ವಿಳಂಬ ಒಪ್ಪಿಕೊಳ್ಳುತ್ತೇನೆ : ಡಿ.ವಿ.ಸದಾನಂದಗೌಡ

BIG NEWS: ವಿಪಕ್ಷ ನಾಯಕರ ಆಯ್ಕೆ ವಿಳಂಬ ಒಪ್ಪಿಕೊಳ್ಳುತ್ತೇನೆ : ಡಿ.ವಿ.ಸದಾನಂದಗೌಡ

ಬೆಂಗಳೂರು: ವಿಧಾನಸಭೆ ಹಾಗೂ ವಿಧಾನ ಪರಿಷತ್ ವಿಪಕ್ಷ ನಾಯಕರ ಆಯ್ಕೆ ವಿಳಂಬವಾಗಿರುವುದನ್ನು ಒಪ್ಪಿಕೊಳ್ಳುತ್ತೇನೆ ಎಂದು ಮಾಜಿ ಸಿಎಂ ಡಿ.ವಿ.ಸದಾನಂದಗೌಡ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ವಿ.ಸದಾನಂದಗೌಡ, ಹೈಕಮಾಂಡ್ ವೀಕ್ಷಕರಿಗೆ ನಮ್ಮ ಅಭಿಪ್ರಾಯಗಳನ್ನು ತಿಳಿಸಿದ್ದೇವೆ. ಸಮರ್ಥ ನಾಯಕರನ್ನು ಆಯ್ಕೆ ಮಾಡುವಂತೆ ಹೇಳಿದ್ದೇವೆ. ಇಂದು ವಿಪಕ್ಷ ನಾಯಕರ ಆಯ್ಕೆ ಆಗಬಹುದು ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವೀಕ್ಷಕರ ವರದಿ ಆಧರಿಸಿ ವಿಪಕ್ಷ ನಾಯಕರ ಆಯ್ಕೆ ನಡೆಯಲಿದೆ. ಮೊನ್ನೆ ಅರುಣ್ ಸಿಂಗ್ ಶಾಸಕರ ಅಭಿಪ್ರಾಯ ಪಡೆದಿದ್ದಾರೆ. ಹಾಗಾಗಿ ಪ್ರತ್ಯೇಕವಾಗಿ ಶಾಸಕರ ಅಭಿಪ್ರಾಯ ಕೇಳುವ ಅಗತ್ಯವಿಲ್ಲ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular