ಬೆಂಗಳೂರು : ಸಾಲದ ನಿರೀಕ್ಷೆಯಲ್ಲಿರುವ ರೈತ ಸಮುದಾಯಕ್ಕೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ 2023-24 ನೇ ಸಾಲಿನಲ್ಲಿ 34 ಲಕ್ಷ ರೈತರಿಗೆ ಕೃಷಿ ಸಾಲ ವಿತರಿಸುವ ಗುರಿ ಹೊಂದಲಾಗಿದೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಹೇಳಿದ್ದಾರೆ.
ವಿಧಾನಸಭೆಯಲ್ಲಿ ಬಿಜೆಪಿ ಶಾಸಕ ಪಿ.ಎಂ. ಮುನಿರಾಜುಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಕೆ.ಎನ್. ರಾಜಣ್ಣ, ರಾಜ್ಯದಲ್ಲಿ ಪ್ರಸಕ್ತ ವರ್ಷದಲ್ಲಿ 34.46 ಲಕ್ಷ ರೈತರಿಗೆ ಒಟ್ಟು 24, 629.58 ಕೋಟಿ ರೂ. ಕೃಷಿ ಸಾಲ ವಿತರಿಸುವ ಗುರಿ ಹೊಂದಲಾಗಿದೆ. ಜೊತೆಗೆ ಹಿಂದಿನ 3 ವರ್ಷಗಳ ಸರಾಸರಿ ಸಾಲ ವಿತರಣೆ ಆಧರಿಸಿ ದೀರ್ಘಾವಧಿ ಕೃಷಿ ಸಾಲ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.