HomeKarnatakaBIG NEWS: ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ವಿಚಾರ; ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ

BIG NEWS: ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ವಿಚಾರ; ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ


ಮೈಸೂರು: ಲೋಕಸಭಾ ಚುನಾವಣೆಯಲ್ಲಿ ಡಾ. ಯತೀಂದ್ರ ಸಿದ್ದರಾಮಯ್ಯ ಸ್ಪರ್ಧಿಸಲಿದ್ದಾರೆ ಎಂಬ ಚರ್ಚೆಗಳು ಆರಂಭವಾಗಿದ್ದು, ಈ ವಿಚಾರವಾಗಿ ಸ್ವತಃ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ಚುನಾವಣೆಗೆ ಇನ್ನೂ 8 ತಿಂಗಳು ಕಾಲಾವಕಾಶಗಳಿದೆ. ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಬಗ್ಗೆ ನಾನಾಗಲಿ, ತಂದೆಯವರಾಗಲಿ ಚರ್ಚೆ ನಡೆಸಿಲ್ಲ. ಪಕ್ಷ ಸೂಚಿಸಿದರೆ ಆದೇಶ ಪಾಲಿಸಲು ಸಿದ್ಧ ಎಂದು ಹೇಳಿದರು.

ಯಾರು ಸೂಕ್ತ ಅಭ್ಯರ್ಥಿ ಎಂಬುದು ಚುನಾವಣೆ ಸಂದರ್ಭದಲ್ಲಿ ಗೊತ್ತಾಗಲಿದೆ. ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಬೇಕು. ಹಾಗಾಗಿ ಸೂಕ್ತ ಅಭ್ಯರ್ಥಿ ಆಯ್ಕೆ ಮಾಡಲಾಗುವುದು. ಒಂದು ವೇಳೆ ನಾನು ಸ್ಪರ್ಧೆ ಮಾಡಲಿ ಎಂದು ಪಕ್ಷ ಸೂಚಿಸಿದರೆ ಪಾಲನೆ ಮಾಡಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular