ಚಿಕ್ಕಮಗಳೂರು : ಜಿಲ್ಲೆಯಲ್ಲಿ ಕೆಲವು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ಮುಂದಿನ ಮೂರು ದಿನ ‘ಆರೆಂಜ್ ಅಲರ್ಟ್’ ಘೋಷಣೆ ಮಾಡಿದೆ.
ಜಿಲ್ಲೆಯ ಕಳಸ,ಮೂಡಿಗೆರೆ, ಶೃಂಗೇರಿ ಎನ್.ಆರ್ಪುರ, ಮುಳ್ಳಯ್ಯನಗಿರಿ ಹಾಗೂ ದತ್ತಪೀಠದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು ನಗರ ಸೇರಿದಂತೆ ಹಲವು ಕಡೆ ಕೂಡ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಬಿಟ್ಟು ಬಿಡೆದೆ ಮಳೆಯಾಗುತ್ತಿದೆ. ಬೆಂಗಳೂರು, ಕರಾವಳಿ ಜಿಲ್ಲೆಗಳು, ಮಲೆನಾಡು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಶುರುವಾಗಿದೆ. ಇಂದಿನಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದ್ದು, ಕರಾವಳಿ ಭಾಗದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ..