HomeKarnatakaBIG NEWS : ಸಣ್ಣ ಸರ್ಕಾರಿ ಸ್ಥಾನಮಾನ ನೀಡಿದರೂ ನಿಭಾಯಿಸುತ್ತೇನೆ : ಯತೀಂದ್ರ ಸಿದ್ದರಾಮಯ್ಯ

BIG NEWS : ಸಣ್ಣ ಸರ್ಕಾರಿ ಸ್ಥಾನಮಾನ ನೀಡಿದರೂ ನಿಭಾಯಿಸುತ್ತೇನೆ : ಯತೀಂದ್ರ ಸಿದ್ದರಾಮಯ್ಯ

ಮೈಸೂರು: ವರುಣಾ ಕ್ಷೇತ್ರಕ್ಕೆ ಸಿಎಂ ಸಿದ್ದರಾಮಯ್ಯ ಹೆಚ್ಚು ಸಮಯ ಕೊಡಲು ಆಗದ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ತಂದೆಯ ಜವಾಬ್ದಾರಿ ನಿಭಾಯಿಸಲು ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಒಲವು ತೋರಿದ್ದಾರೆ.

ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ತಂದೆ ಸಿಎಂ ಆಗಿರುವುದರಿಂದ ಕ್ಷೇತ್ರದ ಜನರಿಗೆ ಹೆಚ್ಚು ಸಮಯ ಕೊಡಲು ಆಗುತ್ತಿಲ್ಲ. ಕ್ಷೇತ್ರದ ಜನರ ಸಮಸ್ಯೆ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಬೇಕು. ಜನರ ಸಣ್ಣಪುಟ್ಟ ಸಮಸ್ಯೆ ನಿವಾರಿಸಲು ಸರ್ಕಾರಿ ಸ್ಥಾನಮಾನ ಅಗತ್ಯ. ಹಾಗಾಗಿ ಕಳೆದ ಬಾರಿಯಂತೆ ಒಂದು ಸಣ್ಣ ಹುದ್ದೆ ನನಗೆ ನೀಡಿದರೂ ನಿಭಾಯಿಸುತ್ತೇನೆ ಎಂದಿದ್ದಾರೆ.

ಒಂದು ಸಣ್ಣ ಸ್ಥಾನ ನೀಡಿದರೂ ಸಹಕಾರಿಯಾಗಲಿದೆ. ಕಳೆದ ಬಾರಿ ಆಶ್ರಯ ಸಮಿತಿ ಅಧ್ಯಕ್ಷ ಸ್ಥಾನ ನೀಡಿದ್ದರು. ಅದು ದೊಡ್ಡ ಹುದ್ದೆಯಲ್ಲ, ಆದರೂ ಈಗ ಲು ಅಂತದ್ದೇ ಸಣ್ಣ ಹುದ್ದೆ ನೀಡಿದರೂ ಜನರ ಸೇವೆ ಮಾಡಲು ಸಾಧ್ಯವಾಗುತ್ತದೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular