BIG NEWS : ರಾಜ್ಯ ಸರ್ಕಾರದ ವಿರುದ್ಧ ಮತ್ತೊಂದು ಬಾಂಬ್ ಸಿಡಿಸಿದ ‘ಜೆಡಿಎಸ್’

ಬೆಂಗಳೂರು : ರಾಜ್ಯ ಸರ್ಕಾರದ ವಿರುದ್ಧ ಆರೋಪಗಳ ಮೇಲೆ ಆರೋಪ ಮಾಡುತ್ತಿರುವ ಜೆಡಿಎಸ್ ಇದೀಗ ಸರಣಿ ಟ್ವೀಟ್ ಮೂಲಕ ಮತ್ತೊಂದು ಹೊಸ ಬಾಂಬ್ ಸಿಡಿಸಿದೆ.

ಈ ಬಗ್ಗೆ ಟ್ವೀಟ್ ಮಾಡಿದ ಜೆಡಿಎಸ್ ಇದು ಪಾರದರ್ಶಕವಷ್ಟೇ ಅಲ್ಲ, ‘ಅಪಾರ’ದರ್ಶಕ ಆಡಳಿತಕ್ಕೆ ಹಿಡಿದ ಕನ್ನಡಿ! ಏಕೆಂದರೆ ಮುಖ್ಯಮಂತ್ರಿಗಳಿಂದ ನಡೆಯುವ ವರ್ಗಾವಣೆ, ಶಿಫಾರಸ್ಸಿನ ಟಿಪ್ಪಣಿಗಳ ಬಿಕರಿಗೆ ಇಲ್ಲಿದೆ ಇನ್ನೊಂದು ಸಾಕ್ಷ್ಯ, ಅಲ್ಲಿನವರಿಗೆ ಇದೇ ಪಂಚಭಕ್ಷ್ಯ. #YstTax #CashForPostingCMO ಅಂದರೆ @CMofKarnataka ಎಂದುಕೊಂಡಿದ್ದ ಕನ್ನಡಿಗರಿಗೆ ಅದು ಈಗ Corruption Management Office ಆಗಿದೆ ಎನ್ನುವುದು ಅರ್ಥವಾಗಿದೆ. ಕಾರಣವಿಷ್ಟೇ,  ಅಲ್ಲಿ #YstTax ಪಾವತಿ ಆಗದಿದ್ದರೆ ವರ್ಗಾವಣೆ ಆದೇಶಗಳೆಲ್ಲ ಮುಲಾಜಿಲ್ಲದೆ ಕಸದ ಬುಟ್ಟಿ ಸೇರುತ್ತವೆ ಎಂದು ಜೆಡಿಎಸ್ ಟ್ವೀಟ್ ಮಾಡಿದೆ.

ವರ್ಗಾವಣೆ ಆದೇಶದ ದಿನವೇ ಅದು ಕೈಗೆ ಸಿಗಬೇಕಾದರೆ #YstTax ಕಡ್ಡಾಯ. ಇಲ್ಲವಾದರೆ ತಪ್ಪಿದ್ದಲ್ಲ ಅನ್ಯಾಯ!! ಕೈ ಬೆಚ್ಚಗೆ ಆಗದಿದ್ದರೆ ವರ್ಗಾವಣೆ ಆದೇಶದ ಪ್ರತಿ ನೇರ ಕಸದ ಬುಟ್ಟಿಗೆ ಹೋಗುವುದು ಗ್ಯಾರಂಟಿ ಎಂದು ಜೆಡಿಎಸ್  ಸರಣಿ ಟ್ವೀಟ್ ಮೂಲಕ ಹೊಸ ಬಾಂಬ್ ಸಿಡಿಸಿದೆ.

ಸತ್ಯಕ್ಕೆ ಸಮಾಧಿ ಕಟ್ಟುವುದು ಕಾಂಗ್ರೆಸ್ ಚಾಳಿ, ಅದು ಮೂಲತಃ ಸುಳ್ಳುಗಳ ವಾಚಾಳಿ. ಮುಖದ ಮೇಲೆ ಕೊಚ್ಚೆ ಹಾಕಿಕೊಂಡವನು ಆ ಗಲೀಜು ಅನ್ಯರ ಕಣ್ಣಿಗೆ ಬೀಳದಿರಲೆಂದು ಇನ್ನೊಬ್ಬರ ಮೇಲೆ ಅದನ್ನೇ ಎರಚಿ ಕುಣಿದನಂತೆ! ಹಂಗಿದೆ ನೋಡಿ ʼಕಮೀಷನ್ ಕಾಂಗ್ರೆಸ್ʼನ ‘ ಹೊಸ ವರಸೆ ಮತ್ತು ಹೊಸ ಕಸವರಿಕೆ ಎಂದು ಜೆಡಿಎಸ್ ಟ್ವೀಟ್ ಮೂಲಕ ಕುಟುಕಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read