HomeLatest NewsBREAKING : ಚಿಕ್ಕಮಗಳೂರು ಜಿಲ್ಲೆಯಲ್ಲೂ `ವಂದೇ ಭಾರತ್ ರೈಲಿ’ಗೆ ಕಲ್ಲು ತೂರಿದ ಕಿಡಿಗೇಡಿಗಳು

BREAKING : ಚಿಕ್ಕಮಗಳೂರು ಜಿಲ್ಲೆಯಲ್ಲೂ `ವಂದೇ ಭಾರತ್ ರೈಲಿ’ಗೆ ಕಲ್ಲು ತೂರಿದ ಕಿಡಿಗೇಡಿಗಳು

ಚಿಕ್ಕಮಗಳೂರು : ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ ಬೆಂಗಳೂರು-ಧಾರವಾಡ ನಡುವಿನ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಚಿಕ್ಕಮಗಳೂರು ಜಿಲ್ಲೆಯಲ್ಲೂ ಕಿಡಿಗೇಡಿಗಳು ಕಲ್ಲು ತೂರಿರುವ ಘಟನೆ ನಡೆದಿದೆ.

ಧಾರವಾಡ-ಬೆಂಗಳೂರಿನ ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಕೆಲ ದಿನಗಳ ಹಿಂದೆ ಅಷ್ಟೇ ದಾವಣಗೆರೆಯಲ್ಲಿ ಕಲ್ಲು ತೂರಾಟ ನಡೆಸಿದ್ದರು. ಇದರ ಬೆನ್ನಲ್ಲೇ ಚಿಕ್ಕಮಗಳೂರು ಜಿಲ್ಲೆಯಲ್ಲೂ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಂದು ಬೆಳಗ್ಗೆ 8.45 ರ ಸುಮಾರಿಗೆ ಚಿಕ್ಕಮಗಳೂರು ಜಿಲ್ಲೆಯ ಬೀರೂರು-ಅರಸೀಕರೆ ನಡುವೆ ಸಂಚರಿಸುತ್ತಿದ್ದ ವೇಳೆ ಕಿಡಿಗೇಡಿಗಳು ವಂದೇ ಭಾರತ್ ಎಕ್ಸ್ ಪ್ರೆಸ್ ಗೆ ಕಲ್ಲು ತೂರಾಟ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular