HomeKarnatakaಬೆಂಗಳೂರು `ಟ್ರಾಫಿಕ್' ಕಿರಿಕಿರಿ ತಪ್ಪಿಸಲು ರಾಜ್ಯ ಸರ್ಕಾರದಿಂದ `ಬಿಗ್ ಪ್ಲಾನ್’ !

ಬೆಂಗಳೂರು `ಟ್ರಾಫಿಕ್’ ಕಿರಿಕಿರಿ ತಪ್ಪಿಸಲು ರಾಜ್ಯ ಸರ್ಕಾರದಿಂದ `ಬಿಗ್ ಪ್ಲಾನ್’ !

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನ ಟ್ರಾಫಿಕ್ ಕಿರಿಕಿರಿ ತಪ್ಪಿಸಲು ರಾಜ್ಯ ಸರ್ಕಾರವು ಹೊಸ ಪ್ಲಾನ್ ಮಾಡಿದ್ದು, ಬ್ರಾಂಡ್ ಬೆಂಗಳೂರು ಯೋಜನೆಯಡಿ ಸುರಂಗ ಮಾರ್ಗ ರಸ್ತೆ ನಿರ್ಮಿಸಲು ಚಿಂತನೆ ನಡೆಸಿದೆ ಎನ್ನಲಾಗಿದೆ.

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ ಪರಿಹಾರಕ್ಕೆ ರಾಜ್ಯ ಸರ್ಕಾರ ಹೊಸ ಪ್ಲಾನ್ ಮಾಡಿದ್ದು, ಬೆಂಗಳೂರಿನಲ್ಲಿ ಹೆಚ್ಚು ಟ್ರಾಫಿಕ್ ಇರುವ ರಸ್ತೆಗಳನ್ನು ಸುರಂಗ ಮಾರ್ಗದಲ್ಲಿ ಬದಲಾವಣೆ ಮಾಡಲು ನಿರ್ಧರಿಸಿದ್ದು, ಇದಕ್ಕಾಗಿ 50 ಸಾವಿರ ಕೋಟಿ ರೂ.ವೆಚ್ಚ ಮಾಡಲು ನಿರ್ಧರಿಸಿದೆ. 2 ಹಂತದಲ್ಲಿ ಸುರಂಗ ಮಾರ್ಗ ರಸ್ತೆ ನಿರ್ಮಿಸಲು ರಾಜ್ಯ ಸರಕಾರ ಚಿಂತನೆ ನಡೆಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಟ್ರಾಫಿಕ್ ಕಿರಿಕಿರಿ ತಪ್ಪಿಸಲು ರಸ್ತೆ ಅಗಲೀಕರಣ, ಎಲಿವೇಟೆಡ್ ರಸ್ತೆ, 20 ಪ್ರಮುಖ ಜಕ್ಷನ್ ರಸ್ತೆಗಳ ಬಗ್ಗೆ ಗಮನ, ನೈಸ್ ರಸ್ತೆಯನ್ನು ವರ್ತುಲ ರಸ್ತೆ ಆಗಿ ಮಾರ್ಪಾಡು, ಪಾದಚಾರಿ ಮಾರ್ಗ ಸುಧಾರಣೆ, ನಗರದಲ್ಲಿ ಸುರಂಗ ರಸ್ತೆಗಳ ನಿರ್ಮಾಣ ಮಾಡಲು ಸರ್ಕಾರ ಪ್ಲಾನ್ ಮಾಡುತ್ತಿದ್ದು, ಈ ಸಂಬಂಧ ಅಧಿಕಾರಿಗಳು ಹಾಗೂ ಬೆಂಗಳೂರಿನ ಪ್ರಮುಖರನ್ನು ಒಳಗೊಂಡ ಒಂದು ಸಮಿತಿ ರಚಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎನ್ನಲಾಗ್ತಿದೆ.

For Latest News Updates, Join Our Whatsapp Community🚩
RELATED ARTICLES

Most Popular