ಬೆಂಗಳೂರು : ‘ಅನ್ನಭಾಗ್ಯ’ ಯೋಜನೆಯಡಿ ಹೆಚ್ಚುವರಿ ಅಕ್ಕಿ ಬದಲಿಗೆ ಹಣ ನೀಡುವ ಯೋಜನೆಯನ್ನು ಜುಲೈ 10 ರಂದು ಸಿಎಂ ಸಿದ್ದರಾಮಯ್ಯ ಉದ್ಘಾಟನೆ ಮಾಡಲಿದ್ದಾರೆ.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಕೂಲಿ ಕಾರ್ಮಿಕರ ಜೊತೆ ಸಂವಾದ ನಡೆಸಿ ನಂತರ ಸಿಎಂ ಸಿದ್ದರಾಮಯ್ಯ ಮಾಹಿತಿ ಪಡೆದುಕೊಳ್ಳಲಿದ್ದಾರೆ. ಸಂಜೆ ಅನ್ನಭಾಗ್ಯ ಯೋಜನೆಯ ಹಣವನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ವರ್ಗಾವಣೆ ಮಾಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ಜುಲೈ 10ರಿಂದ ಅಕ್ಕಿ ಬದಲು ಹಣ ಕೊಡುವ ಪ್ರಕ್ರಿಯೆ ಶುರುವಾಗಲಿದೆ . ಜುಲೈ 10ರಿಂದ ಕೊಡುತ್ತೇವೆ ಎಂದಿದ್ದಾರೆ. ಜುಲೈ 1ರಿಂದಲೇ ಹಣ ಕೊಡುತ್ತೇವೆ ಎಂದು ಹೇಳಿಲ್ಲ, ಜುಲೈ 10ರಿಂದ ಹಣ ಕೊಡುವ ಪ್ರಕ್ರಿಯೆ ಆರಂಭವಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದರು. 1 ಕೋಟಿ 28 ಲಕ್ಷ ಕಾರ್ಡ್ ಗಳ ಪೈಕಿ 99.99% ಆಧಾರ್ ಸೀಡಿಂಗ್ ಆಗಿದೆ. 1 ಕೋಟಿ 22 ಲಕ್ಷ ಕಾರ್ಡ್ ಗಳಿಗೆ ಬ್ಯಾಂಕ್ ಅಕೌಂಟ್ ಲಿಂಕ್ ಆಗಿದೆ. ಬಾಕಿ ಉಳಿದಿರುವ 6 ಲಕ್ಷ ಕಾರ್ಡ್ ಗಳು ಆಧಾರ್ ಲಿಂಕ್ ಆಗಬೇಕು. ಹಾಗಾಗಿ ಜುಲೈ ತಿಂಗಳಲ್ಲೇ ಹಣ ಹಾಕುತ್ತೇವೆ. 10ರಿಂದ ಆರಂಭವಾಗಬಹುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಜುಲೈ 10 ರಿಂದ ಹಣ ಹಾಕುವಂತೆ ಸರ್ಕಾರ ಸೂಚಿಸಿದ್ದು, ಹಣಹಾಕಲು ಆಹಾರ ಕೂಡ ಎಲ್ಲಾ ಸಿದ್ದತೆ ನಡೆಸಿದೆ ಎನ್ನಲಾಗಿದೆ.