HomeKarnatakaಪಿಎಸ್ಐ ಮರುಪರೀಕ್ಷೆ ನಿರೀಕ್ಷೆಯಲ್ಲಿದ್ದವರಿಗೆ ಶಾಕ್: ಮರು ಪರೀಕ್ಷೆ ಸಾಧ್ಯವಿಲ್ಲವೆಂದು ಹೈಕೋರ್ಟ್ ಗೆ ಸರ್ಕಾರ ಮಾಹಿತಿ

ಪಿಎಸ್ಐ ಮರುಪರೀಕ್ಷೆ ನಿರೀಕ್ಷೆಯಲ್ಲಿದ್ದವರಿಗೆ ಶಾಕ್: ಮರು ಪರೀಕ್ಷೆ ಸಾಧ್ಯವಿಲ್ಲವೆಂದು ಹೈಕೋರ್ಟ್ ಗೆ ಸರ್ಕಾರ ಮಾಹಿತಿ

ಬೆಂಗಳೂರು: 545 ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಪಟ್ಟಿಯಲ್ಲಿ ಹೆಸರಿರುವ ಕಳಂಕಿತ ಅಭ್ಯರ್ಥಿಗಳನ್ನು ಹೊರತುಪಡಿಸಿ ಉಳಿದ ಅಭ್ಯರ್ಥಿಗಳಿಗೆ ಮರು ಪರೀಕ್ಷೆ ನಡೆಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಗೆ ಸರ್ಕಾರ ಮಾಹಿತಿ ನೀಡಿದೆ.

ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದ ಹಿನ್ನೆಲೆಯಲ್ಲಿ ಈ ಮೊದಲು ನಡೆಸಿದ ಲಿಖಿತ ಪರೀಕ್ಷೆ ರದ್ದುಪಡಿಸಿ ಮರು ಪರೀಕ್ಷೆ ನಡೆಸಲು ಸರ್ಕಾರ ಹೊರಡಿಸಿದ ಆದೇಶ ರದ್ದುಪಡಿಸಬೇಕೆಂದು ಕೋರಿ ಆಯ್ಕೆಯಾಗಿದ್ದ ನೂರಕ್ಕೂ ಅಧಿಕ ಅಭ್ಯರ್ಥಿಗಳು ಹೈಕೋರ್ಟ್ ಗೆ ಆಯ್ಕೆ ಅರ್ಜಿ ಸಲ್ಲಿಸಿದ್ದು, ನ್ಯಾಯಮೂರ್ತಿಜಿ ಜಿ.ನರೇಂದರ್ ನೇತೃತ್ವದ ವಿಭಾಗಿಯ ಪೀಠದಲ್ಲಿ ಬುಧವಾರ ವಿಚಾರಣೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಡ್ವೊಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ ಅವರು, ಪಿಎಸ್ಐ ಪರೀಕ್ಷೆಯಲ್ಲಿ ಉತ್ತೀರ್ಣರಾದವರಲ್ಲಿ ದೋಷಾರೋಪ ಪಟ್ಟಿಯಲ್ಲಿ ಹೆಸರಿಸಿದ ಅಭ್ಯರ್ಥಿಗಳನ್ನು ಹೊರತುಪಡಿಸಿ ಉಳಿದವರಿಗೆ ಮರು ಪರೀಕ್ಷೆ ನಡೆಸಲು ಸಾಧ್ಯವಿಲ್ಲ. ಸರ್ಕಾರದ ಮಟ್ಟದಲ್ಲಿ ಈ ಸಂಬಂಧ ಚರ್ಚೆ ನಡೆದು, ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಲಾಗುತ್ತಿದೆ. ಯಾವ ಕಾರಣಕ್ಕೆ ಪರೀಕ್ಷೆ ನಡೆಸಲು ಸಾಧ್ಯವಿಲ್ಲ ಎಂಬುದರ ಬಗ್ಗೆ ವರದಿಯಲ್ಲಿ ತಿಳಿಸಲಾಗಿದೆ ಎಂದು ಹೇಳಿದ್ದಾರೆ.

ಜುಲೈ 10ರಂದು ಮಧ್ಯಾಹ್ನ ವಿಚಾರಣೆ ನಡೆಸುವುದಾಗಿ ಕೋರ್ಟ್ ಹೇಳಿದೆ. ಎಲ್ಲಾ ಪಕ್ಷಗಾರರ ಪರ ವಕೀಲರಿಗೆ ಲಿಖಿತ ವಾದಾಂಶ ಸಲ್ಲಿಸಲು ಸೂಚನೆ ನೀಡಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular