ಬೆಂಗಳೂರು: ಎಪಿಎಲ್ ಮತ್ತು ಬಿಪಿಎಲ್ ಕಾರ್ಡ್ ಗಳಲ್ಲಿ ಯಜಮಾನಿ ಸ್ಥಾನದಲ್ಲಿ ನಮೂದಿಸಿದ ಪ್ರತಿಯೊಬ್ಬರು ಗೃಹಲಕ್ಷ್ಮಿ ಯೋಜನೆಗೆ ಅರ್ಹರು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಗೃಹಲಕ್ಷ್ಮಿ ಯೋಜನೆಗೆ ಪತಿ ಹಾಗೂ ಪತ್ನಿ ಆಧಾರ್ ಕಾರ್ಡ್, ಮೊಬೈಲ್ ನಂಬರ್ ಮಾತ್ರ ಸಾಕು. ಪಡಿತರ ಚೀಟಿ ಕೂಡ ಕೇಳುವುದಿಲ್ಲ. ಆಧಾರ್ ಕಾರ್ಡ್ ನಲ್ಲಿ ಜೋಡಣೆಯಾಗಿರುವ ಖಾತೆಗೆ ಹಣ ವರ್ಗಾವಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಆಧಾರ್ ಕಾರ್ಡ್ ಗೆ ಜೋಡಣೆ ಆಗದ ಬ್ಯಾಂಕ್ ಖಾತೆಗೆ ಹಣ ಹಾಕಲು ಮನವಿ ಮಾಡಿದಲ್ಲಿ ಅದಕ್ಕೂ ಅವಕಾಶವಿದೆ. ಆಧಾರ್ ಕಾರ್ಡ್ ಜೋಡಣೆ ಇರುವ ಬ್ಯಾಂಕ್ ಖಾತೆಯಿಂದ ಲೋನ್ ಪಡೆದಿದ್ದಲ್ಲಿ ಗೃಹಲಕ್ಷ್ಮಿ ಹಣ ಇಎಂಐಗೆ ಕಡಿತ ಮಾಡಿಕೊಳ್ಳುತ್ತಾರೆ ಎಂಬ ಆತಂಕವಿದ್ದಲ್ಲಿ ಆಧಾರ್ ಜೋಡಣೆ ಆಗದ ಬ್ಯಾಂಕ್ ಖಾತೆಯ ಪಾಸ್ ಬುಕ್ ಜೆರಾಕ್ಸ್ ಪ್ರತಿ ನೀಡಲು ಅವಕಾಶ ನೀಡಲಾಗಿದೆ. ಇಂತಹ ಖಾತೆಗೂ ಹಣ ಹಾಕಲಾಗುವುದು. ಹಣ ಸಂದಾಯವಾದ ನಂತರ ಮೊಬೈಲ್ ಸಂಖ್ಯೆಗೆ ಧ್ವನಿ ಸಂದೇಶ ಕೂಡ ಬರಲಿದೆ ಎಂದು ತಿಳಿಸಿದ್ದಾರೆ.