HomeKarnatakaಶಿವಾಜಿನಗರ ಮಸೀದಿಯಲ್ಲಿ ಉಗ್ರರು ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಕರೆ: ಪರಿಶೀಲನೆ ಬಳಿಕ ನಿಟ್ಟುಸಿರು ಬಿಟ್ಟ ಜನ

ಶಿವಾಜಿನಗರ ಮಸೀದಿಯಲ್ಲಿ ಉಗ್ರರು ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಕರೆ: ಪರಿಶೀಲನೆ ಬಳಿಕ ನಿಟ್ಟುಸಿರು ಬಿಟ್ಟ ಜನ

ಬೆಂಗಳೂರು: ಬೆಂಗಳೂರಿನ ಶಿವಾಜಿನಗರ ಮಸೀದಿಯಲ್ಲಿ ಬಾಂಬ್ ಇಡಲಾಗಿದೆ ಎಂದು ರಾತ್ರಿ 11 ಗಂಟೆಗೆ ಬೆದರಿಕೆ ಕರೆ ಬಂದಿದೆ.

ಪೊಲೀಸ್ ಸಹಾಯವಾಣಿ ಸಂಖ್ಯೆ 112ಕ್ಕೆ ಕರೆ ಮಾಡಿದ ಅಪರಿಚಿತ ವ್ಯಕ್ತಿ ಶಿವಾಜಿನಗರದ ಆಜಂ ಮಸೀದಿಗೆ ಬಾಂಬ್ ಇಟ್ಟಿದ್ದಾರೆ ಎಂದು ಹೇಳಿದ್ದಾನೆ. ಮಸೀದಿಯಲ್ಲಿ ಉಗ್ರರು ಬಾಂಬ್ ಇಟ್ಟಿರುವುದಾಗಿ ಅಪರಿಚಿತ ವ್ಯಕ್ತಿ ಕರೆ ಮಾಹಿತಿ ನೀಡಿದ್ದಾನೆ. ಮಾಹಿತಿ ತಿಳಿದು ಸ್ಥಳಕ್ಕೆ ಡೌಡಾಯಿಸಿದ ಶಿವಾಜಿನಗರ ಠಾಣೆ ಪೋಲೀಸರು ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಿರಿಯ ಅಧಿಕಾರಿಗಳ ಸಹಿತ ಭೇಟಿ ನೀಡಿ ಸ್ಥಳ ಪಡಿಶೀಲನೆ ನಡೆಸಿದ್ದಾರೆ. ಮಸೀದಿ ಪರಿಶೀಲನೆ ಬಳಿಕ ಹುಸಿಬಾಂಬ್ ಕರೆ ಇದಾಗಿದೆ ಎಂದು ಗೊತ್ತಾಗಿದೆ. ಆತಂಕಕ್ಕೆ ಒಳಗಾಗಿದ್ದ ಸಾರ್ವಜನಿಕರು ನಿಟ್ಟುಸಿರು ಬಿಟ್ಟಿದ್ದಾರೆ. ಹುಸಿ ಬಾಂಬ್ ಕರೆ ಮಾಡಿದ ಅಪರಿಚಿತ ವ್ಯಕ್ತಿಗಾಗಿ ಶಿವಾಜಿನಗರ ಠಾಣೆ ಪೊಲೀಸರು ಹುಡುಕಾಟ ನಡೆಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular