HomeKarnatakaBIG NEWS: ಕೆ.ಎಸ್.ಆರ್.ಟಿ.ಸಿ ಚಾಲಕ ಆತ್ಮಹತ್ಯೆ ಯತ್ನ ಕೇಸ್; ಜಗದೀಶ್ ವರ್ಗಾವಣೆ ಆದೇಶ ರದ್ದು

BIG NEWS: ಕೆ.ಎಸ್.ಆರ್.ಟಿ.ಸಿ ಚಾಲಕ ಆತ್ಮಹತ್ಯೆ ಯತ್ನ ಕೇಸ್; ಜಗದೀಶ್ ವರ್ಗಾವಣೆ ಆದೇಶ ರದ್ದು

ಮಂಡ್ಯ: ಸಚಿವರ ವಿರುದ್ಧ ಆರೋಪ ಮಾಡಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕ ಜಗದೀಶ್ ವರ್ಗಾವಣೆ ಆದೇಶ ರದ್ದಾಗಿದೆ ಎಂದು ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ.

ಮಂಡ್ಯ ಜಿಲ್ಲೆಯಲ್ಲಿ ಮಾತನಾಡಿದ ಸಚಿವರು, ನಾಗಮಂಗಲ ಡಿಪೋ ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕ ಜಗದೀಶ್ ವರ್ಗಾವಣೆ ಆದೇಶ ರದ್ದುಪಡಿಸಲಾಗಿದೆ ಎಂದು ತಿಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಸ್ ಚಾಲಕ ಜಗದೀಶ್, ಜೆಡಿಎಸ್ ಪರ ಪ್ರಚಾರ ಮಾಡಿದ ಕಾರಣಕ್ಕೆ ಕೃಷಿ ಸಚಿವ ಚಲುವರಾಯಸ್ವಾಮಿ ರಾಜಕೀಯ ದ್ವೇಷದಿಂದ ನನ್ನನ್ನು ವರ್ಗಾವಣೆ ಮಾಡಿದ್ದಾರೆ ಎಂದು ಆರೋಪಿಸಿ ಡಿಪೋ ಎದುರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು.

ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ. ಇದೀಗ ಜಗದೀಶ್ ವರ್ಗಾವಣೆ ಆದೇಶ ರದ್ದುಪಡಿಸಿರುವುದಾಗಿ ಸಚಿವರು ಸ್ಪಷ್ಟಪಡಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular