
ಉಡುಪಿ: ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಉಡುಪಿ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ವರುಣಾರ್ಭಟಕ್ಕೆ ಕೊಡಂಕೂರು ಪ್ರದೇಶ ಸಂಪೂರ್ಣ ಜಲಾವೃತಗೊಂಡಿದ್ದು, ಹೊರ ಪ್ರಪಂಚದ ಸಂಪರ್ಕವನ್ನೇ ಕಡಿದುಕೊಂಡಿದೆ.
ಕೊಡಂಕೂರಿನಲ್ಲಿ ಹಲವು ಮನೆಗಳ ಸುತ್ತ ನೀರು ನಿಂತಿದ್ದು, ನಡುಗಡ್ಡೆಯಂತಾಗಿದೆ. ಇಲ್ಲಿನ ಮನೆಗಳಲ್ಲಿ ಸಿಲುಕಿದ್ದ ಮಹಿಳೆಯರು, ಮಕ್ಕಳು ರಕ್ಷಣೆಗಾಗಿ ಮೊರೆಯಿಟ್ಟಿದ್ದು, ಅಗ್ನಿಶಾಮಕ ಸಿಬ್ಬಂದಿಗಳು ಬೋಟ್ ಗಳನ್ನು ಬಳಸಿ ಮನೆಯಲ್ಲಿ ಸಿಲುಕಿದ್ದ ಮಹಿಳೆಯರು ಹಾಗೂ ಐವರು ಮಕ್ಕಳನ್ನು ರಕ್ಷಣೆ ಮಾಡಿದ್ದಾರೆ.
ಇನ್ನು ಮಳೆಯಿಂದಾಗಿ ಬಡಗುಪೇಟೆ, ಕಲ್ಸಂಕ ಪ್ರದೇಶಗಳು ಜಲಾವೃತಗೊಂಡಿದ್ದು ಮನೆ, ಅಂಗಡಿ ಮುಗ್ಗಟ್ಟುಗಳಿಗೆ ನೀರು ನುಗ್ಗಿದೆ. ವ್ಯಾಪಾರ ವಹಿವಾಟು ಸ್ಥಗಿತಗೊಂಡಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ.