HomeKarnatakaBIG NEWS: ಧಮ್, ತಾಕತ್ತಿದ್ದರೆ ಪೆನ್ ಡ್ರೈವ್ ಬಿಡುಗಡೆ ಮಾಡಲಿ; HDKಗೆ ಮಾಜಿ ಸಿಎಂ ವೀರಪ್ಪ...

BIG NEWS: ಧಮ್, ತಾಕತ್ತಿದ್ದರೆ ಪೆನ್ ಡ್ರೈವ್ ಬಿಡುಗಡೆ ಮಾಡಲಿ; HDKಗೆ ಮಾಜಿ ಸಿಎಂ ವೀರಪ್ಪ ಮೊಯ್ಲಿ ಸವಾಲು

ಚಿಕ್ಕಬಳ್ಳಾಪುರ: ವಿಧಾನಸಭಾ ಚುನಾವಣೆಯಲ್ಲಿ ಸೋತು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹತಾಶರಾಗಿದ್ದಾರೆ. ಅವರಿಗೆ ಧಮ್, ತಾಕತ್ತಿದ್ದರೆ ಪೆನ್ ಡ್ರೈವ್ ಬಿಡುಗಡೆ ಮಾಡಲಿ ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ ಸವಾಲು ಹಾಕಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ವೀರಪ್ಪ ಮೊಯ್ಲಿ, ಚುನಾವಣಾ ಸೋಲಿನಿಂದ ಅವರು ಏನೇನೋ ಮಾತನಾಡುತ್ತಿದ್ದಾರೆ. ಹೆಚ್.ಡಿ.ಕೆ ಸಿಎಂ ಆಗಿದ್ದಾಗಿನ ದಾಖಲೆ ಪೆನ್ ಡ್ರೈವ್ ನಲ್ಲಿ ಇರಬೇಕು. ರಾಜ್ಯ ಕಾಂಗ್ರೆಸ್ ಸರ್ಕಾರ ತಪ್ಪು ಮಾಡಿಲ್ಲ, ತಪ್ಪಿನಲ್ಲಿ ಸಿಲುಕಿಸುವ ಯತ್ನವನ್ನು ಬಿಜೆಪಿ, ಜೆಡಿಎಸ್ ನವರು ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಚ್.ಡಿ. ಕುಮಾರಸ್ವಾಮಿಯವರಿಗೆ ತಾಕತ್ತಿದ್ದರೆ ಪೆನ್ ಡ್ರೈವ್ ಬಿಡುಗಡೆ ಮಾಡಿ, ಬಹಿರಂಗ ಪಡಿಸಲಿ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular