
ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಸಂಶಿ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ವೀರಭದ್ರಯ್ಯ ನಿಂಗಯ್ಯ ಮಠಪತಿ ಎಂಬ ವ್ಯಕ್ತಿ ಬುರ್ಖಾ ಧರಿಸಿ ಬಸ್ ನಿಲ್ದಾಣಕ್ಕೆ ಆಗಮಿಸಿದ್ದಾನೆ. ಅನುಮಾನಗೊಂಡ ಸಾರ್ವಜನಿಕರು ಆತನನ್ನು ಹಿಡಿದು ವಿಚಾರಿಸಿದಾಗ ವಿಷಯ ಬಾಯ್ಬಿಟ್ಟಿದ್ದಾನೆ.
ವಿಜಯಪುರ ಜಿಲ್ಲೆಯ ಸಿಂದಗಿಯ ಘೋಡಗೋರಿ ನಿವಾಸಿಯಾದ ವೀರಭದ್ರಯ್ಯ ನಿಂಗಯ್ಯ ಮಠಪತಿ, ತಾನು ಭಿಕ್ಷಾಟನೆಗಾಗಿ ಈ ರೀತಿ ವೇಷ ತೊಟ್ಟಿರುವುದಾಗಿ ಹೇಳಿದ್ದಾನೆ. ಆದರೆ ಹಲವರು ಉಚಿತ ಬಸ್ ಪ್ರಯಾಣಕ್ಕಾಗಿ ಆತ ಮಹಿಳೆಯರಂತೆ ವೇಷ ಧರಿಸಿದ್ದಾನೆ ಎಂದು ಭಾವಿಸಿದ್ದರು. ವೀರಭದ್ರಯ್ಯ ಬಳಿ ಮಹಿಳೆಯ ಆಧಾರ್ ಕಾರ್ಡ್ ಝೆರಾಕ್ಸ್ ಕೂಡ ಸಿಕ್ಕಿದ್ದು, ಅನುಮಾನಕ್ಕೆ ಕಾರಣವಾಗಿದೆ.

