HomeKarnatakaBREAKING : ಬೀದರ್ ಜಿಲ್ಲೆಯಲ್ಲಿ ಘೋರ ದುರಂತ : ಇಬ್ಬರು ಮಕ್ಕಳೊಂದಿಗೆ ಬಾವಿಗೆ ಜಿಗಿದು ತಂದೆ...

BREAKING : ಬೀದರ್ ಜಿಲ್ಲೆಯಲ್ಲಿ ಘೋರ ದುರಂತ : ಇಬ್ಬರು ಮಕ್ಕಳೊಂದಿಗೆ ಬಾವಿಗೆ ಜಿಗಿದು ತಂದೆ ಆತ್ಮಹತ್ಯೆ

ಬೀದರ್ : ಬೀದರ್ ಜಿಲ್ಲೆಯಲ್ಲಿ ಘೋರ ದುರಂತವೊಂದು ನಡೆದಿದ್ದು, ಇಬ್ಬರು ಮಕ್ಕಳೊಂದಿಗೆ ಬಾವಿಗೆ ಜಿಗಿತು ತಂದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಧುಮ್ಯನಸೂರು ಗ್ರಾಮದಲ್ಲಿ ಆಟೋ ಚಾಲಕ ತನ್ನ ಇಬ್ಬರು ಮಕ್ಕಳನ್ನು ಬಾವಿಗೆ ಎಸೆದು ಬಳಿಕ ತಾನೂ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತರನ್ನು ಆಟೋ ಚಾಲಕ ಅಂಕುಶ್ ಹುಚ್ಚೇನೂರು(28), ಮಗ ಸಾಯಿರಾಜ್ (5) ಹಾಗೂ ಪುತ್ರಿ ತನು (6) ಎಂದು ಗುರುತಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಷಯ ತಿಳಿದು ಸ್ಥಳಕ್ಕೆ ಹುಮ್ನಾಬಾದ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬಾವಿಯಿಂದ ಮೂವರ ಮೃತದೇಹಗಳನ್ನು ಹೊರತೆಗೆಯಲಾಗಿದೆ. ಹುಮ್ನಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular