ಬೆಂಗಳೂರು : ಶೀಘ್ರದಲ್ಲೇ ರೈತರ ಪಂಪ್ ಸೆಟ್ ಗೆ ಸೌರವಿದ್ಯುತ್ ಸಂಪರ್ಕ ಕಲ್ಪಿಸುವ ಯೋಜನೆ ಜಾರಿಯಾಗಲಿದೆ ಎಂದು ಇಂಧನ ಸಚಿವ ಕೆ ಜೆ ಜಾರ್ಜ್ ಹೇಳಿದರು.
ಕಲಾಪದ ವೇಳೆ ಮಾತನಾಡಿದ ಸಚಿವರು ಶೀಘ್ರದಲ್ಲೇ ರೈತರ ಪಂಪ್ ಸೆಟ್ ಗೆ ಸೌರವಿದ್ಯುತ್ ಸಂಪರ್ಕ ಕಲ್ಪಿಸುವ ಯೋಜನೆ ಜಾರಿಯಾಗಲಿದೆ , ರೈತರು ಪಂಪ್ ಸೆಟ್ ಗಳಿಗೆ ಸೌರ್ ವಿದ್ಯುತ್ ಕಲ್ಪಿಸಿಕೊಳ್ಳಲು ಸುಮಾರು 4.5 ಲಕ್ಷ ರೂ ಖರ್ಚಾಗಬಹುದು , ಕೇಂದ್ರ ಮತ್ತು ರಾಜ್ಯ ಸರ್ಕಾರ 3.5 ಲಕ್ಷ ರೂ ಸಹಾಯಧನ ದೊರೆಯಲಿದೆ. ಉಳಿದ 1 ಲಕ್ಷವನ್ನು ಬ್ಯಾಂಕ್ ಮೂಲಕ ನೀಡುವ ಸೌಲಭ್ಯ ಕಲ್ಪಿಸಲು ಸರ್ಕಾರ ಚಿಂತನೆ ನಡೆಸಿದೆ. ರೈತರ ಕೃಷಿ ಪಂಪ್ಸೆಟ್ಗಳಿಗೆ ಸಹಾಯ ಧನದ ರೂಪದಲ್ಲಿ 16 ಸಾವಿರ ಕೋಟಿ ರೂ. ನೀಡಲಾಗುತ್ತಿದೆ ಎಂದು ಇಂಧನ ಸಚಿವ ಕೆ ಜೆ ಜಾರ್ಜ್ ಹೇಳಿದರು.
ಹಂತ ಹಂತವಾಗಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ : ಸಿಎಂ ಸಿದ್ದರಾಮಯ್ಯ
ಬೆಂಗಳೂರು : ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ವಿಧಾನ ಪರಿಷತ್ ನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಹೆಚ್ ಎಸ್ ಗೋಪಿನಾಥ್ ಪ್ರಶ್ನಗೆ ಉತ್ತರಿಸಿದರು.
ನಾವು ನುಡಿದಂತೆ ನಡೆಯುತ್ತೇವೆ, ಪ್ರಣಾಳಿಕೆಯಲ್ಲಿ ಭರವಸೆ ನೀಡಿದಂತೆ ಖಾಲಿ ಇರುವ ಎಲ್ಲಾ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಸಿಎಂ ಭರವಸೆ ನೀಡಿದ್ದಾರೆ. ರಾಜ್ಯದಲ್ಲಿ ಒಟ್ಟು 43 ಇಲಾಖೆಗಳಿಂದ 7,72,225 ಹುದ್ದೆಗಳಿದ್ದು, ಇದರಲ್ಲಿ 5,16,105 ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. 2,55,900 ಹುದ್ದೆಗಳು ಖಾಲಿಯಿದ್ದು, ಶೇ.33ರಷ್ಟು ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ