ಬೆಂಗಳೂರು : ವಿಧಾನಸಭೆಯ ಉಪಾಧ್ಯಕ್ಷರಾಗಿ ಹಾವೇರಿಯ ಕಾಂಗ್ರೆಸ್ ಶಾಸಕ ರುದ್ರಪ್ಪ ಲಮಾಣಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಶುಭ ಕೋರಿದ್ದಾರೆ.
ವಿಧಾನಸಭೆಯ ಉಪಸಭಾಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆಯಾದ ಶಾಸಕ ರುದ್ರಪ್ಪ ಲಮಾಣಿ ಅವರಿಗೆ ಹೃದಯಪೂರ್ವಕ ಅಭಿನಂದನೆಗಳು. ತಮ್ಮ ಕಾರ್ಯಾವಧಿಯಲ್ಲಿ ಸಾರ್ವಜನಿಕ ಹಿತಾಸಕ್ತಿಯ ವಿಷಯ-ವಿಚಾರಗಳ ಚರ್ಚೆಯಲ್ಲಿ ಸದನದ ಸರ್ವಸದಸ್ಯರು ಹೆಚ್ಚು ಪಾಲ್ಗೊಳ್ಳುವಂತಾಗಲಿ, ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಆಶಯಗಳನ್ನು ಎತ್ತಿಹಿಡಿಯುವ ಕೆಲಸವಾಗಲೆಂದು ಆಶಿಸುತ್ತೇನೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ವಿಧಾನಸಭೆಯ ಉಪಾಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಿಗದಿಯಾಗಿತ್ತು, ಈ ಸ್ಥಾನಕ್ಕೆ ಕಾಂಗ್ರೆಸ್ನ ಹಾವೇರಿ ಶಾಸಕ ರುದ್ರಪ್ಪ ಲಮಾಣಿ ಅವರನ್ನು ಅಭ್ಯರ್ಥಿಯಾಗಿ ಕಾಂಗ್ರೆಸ್ ಕಣಕ್ಕಿಳಿಸಿತ್ತು.ನಿನ್ನೆ ವಿಧಾನಸಭೆಯ ಉಪಾಧ್ಯಕ್ಷ ಸ್ಥಾನಕ್ಕೆ ಹಾವೇರಿಯ ಶಾಸಕ ರುದ್ರಪ್ಪ ಲಮಾಣಿ ಅವರು ನಿನ್ನೆಯಷ್ಟೇ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದ್ದರು.ಇಂದು ವಿಧಾನಸಭೆ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ರುದ್ರಪ್ಪ ಲಮಾಣಿ ಅವರಿಗೆ ಸಚಿವ ಸ್ಥಾನ ಕೊನೆಘಳಿಗೆಯಲ್ಲಿ ಕೈ ತಪ್ಪಿತ್ತು. ಈ ಹಿನ್ನೆಲೆಯಲ್ಲಿ ಅವರಿಗೆ ಉಪಾಧ್ಯಕ್ಷ ಸ್ಥಾನ ನೀಡಲು ಕಾಂಗ್ರೆಸ್ ತೀರ್ಮಾನಿಸಿತ್ತು. ಅದರಂತೆ ರುದ್ಪಪ್ಪ ಲಮಾಣಿ ಅವರು ವಿಧಾನಸಭೆಯ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
https://twitter.com/CMofKarnataka/status/1676903012911001600?ref_src=twsrc%5Etfw%7Ctwcamp%5Etweetembed%7Ctwterm%5E1676903012911001600%7Ctwgr%5E11ef8af126edbba8eafc8ac42a9df43bdcec780c%7Ctwcon%5Es1_&ref_url=https%3A%2F%2Ftv9kannada.com%2Fkarnataka%2Fbengaluru%2Fkarnataka-monsoon-budget-session-2023-bangalore-weather-forecast-rain-school-college-holiday-siddaramaiah-hd-kumaraswamy-congress-guarantee-karnataka-politics-live-updates-ayb-616624.html