HomeKarnatakaರಾಜ್ಯ ಸರ್ಕಾರಿ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಬಂಪರ್ ಸುದ್ದಿ : ಶೀಘ್ರವೇ 2.5 ಲಕ್ಷ `ಸರ್ಕಾರಿ ಹುದ್ದೆ'...

ರಾಜ್ಯ ಸರ್ಕಾರಿ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಬಂಪರ್ ಸುದ್ದಿ : ಶೀಘ್ರವೇ 2.5 ಲಕ್ಷ `ಸರ್ಕಾರಿ ಹುದ್ದೆ’ ಭರ್ತಿ!

ಬೆಂಗಳೂರು : ರಾಜ್ಯ ಸರ್ಕಾರಿ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ ಖಾಲಿ ಇರುವ 2.5 ಲಕ್ಷ ಸರ್ಕಾರಿ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು ಎಂದು ಹೇಳಿದ್ದಾರೆ.

ವಿಧಾನಪರಿಷತ್ ನಲ್ಲಿ ಈ ಬಗ್ಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ,ಚುನಾವಣೆ ವೇಳೆ ಖಾಲಿ ಇರುವ ಸರ್ಕಾರಿ ಹುದ್ದೆ ಭರ್ತಿ ಮಾಡುವುದಾಗಿ ನೀಡಿದ್ದ ಭರವಸೆ ಈಡೇರಿಸಲು ಬದ್ದರಾಗಿದ್ದು,  ರಾಜ್ಯದಲ್ಲಿ ವಿವಿಧ ಇಲಾಖೆಯಲ್ಲಿ 2,55,920 ಹುದ್ದೆಗಳು ಖಾಲಿ ಇದ್ದು, ಒಂದೇ ಬಾರಿ ಭರ್ತಿ ಮಾಡುವುದು ಅಸಾಧ್ಯ ಹೀಗಾಗಿ ಹಂತ ಹಂತವಾಗಿ ಭರ್ತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯ ಸರ್ಕಾರಿ ನೌಕರರ ವೇತನ ಹೆಚ್ಚಳ ಮತ್ತು ಭತ್ಯೆ ಪರಿಷ್ಕರಿಸುವ ಸಂಬಂಧ ಆರ್ಥಿಕ ಸ್ಥಿತಿಗತಿ ಪರಿಶೀಲಿಸಿ ಕ್ರಮ ವಹಿಸಲಾಗುವುದು ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular