HomeKarnatakaರಾಜ್ಯದ ರೈತ ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್

ರಾಜ್ಯದ ರೈತ ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್

 

ಬೆಂಗಳೂರು : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಶೀಘ್ರದಲ್ಲೇ ರೈತರ ಪಂಪ್ ಸೆಟ್ ಗೆ ಸೌರವಿದ್ಯುತ್ ಸಂಪರ್ಕ ಕಲ್ಪಿಸುವ ಯೋಜನೆ ಜಾರಿಯಾಗಲಿದೆ ಎಂದು ಇಂಧನ ಸಚಿವ ಕೆ ಜೆ ಜಾರ್ಜ್ ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಲಾಪದ ವೇಳೆ ಮಾತನಾಡಿದ ಸಚಿವರು ಶೀಘ್ರದಲ್ಲೇ ರೈತರ ಪಂಪ್ ಸೆಟ್ ಗೆ ಸೌರವಿದ್ಯುತ್ ಸಂಪರ್ಕ ಕಲ್ಪಿಸುವ ಯೋಜನೆ ಜಾರಿಯಾಗಲಿದೆ , ರೈತರು ಪಂಪ್ ಸೆಟ್ ಗಳಿಗೆ ಸೌರ್ ವಿದ್ಯುತ್ ಕಲ್ಪಿಸಿಕೊಳ್ಳಲು ಸುಮಾರು 4.5 ಲಕ್ಷ ರೂ ಖರ್ಚಾಗಬಹುದು ಎಂದು ತಿಳಿಸಿದ್ದಾರೆ.

ಸೌರ ವಿದ್ಯುತ್ ಸಂಪರ್ಕ ಕಲ್ಪಿಸುವ ಯೋಜನೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ 3.5 ಲಕ್ಷ ರೂ ಸಹಾಯಧನ ದೊರೆಯಲಿದೆ. ಉಳಿದ 1 ಲಕ್ಷವನ್ನು ಬ್ಯಾಂಕ್ ಮೂಲಕ ನೀಡುವ ಸೌಲಭ್ಯ ಕಲ್ಪಿಸಲು ಸರ್ಕಾರ ಚಿಂತನೆ ನಡೆಸಿದೆ. ರೈತರ ಕೃಷಿ ಪಂಪ್ಸೆಟ್ಗಳಿಗೆ ಸಹಾಯ ಧನದ ರೂಪದಲ್ಲಿ 16 ಸಾವಿರ ಕೋಟಿ ರೂ. ನೀಡಲಾಗುತ್ತಿದೆ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular