HomeKarnatakaBREAKING : ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರಕ್ಕೆ ಇಬ್ಬರು ಬಲಿ!

BREAKING : ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರಕ್ಕೆ ಇಬ್ಬರು ಬಲಿ!

ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಮಳೆ ಸಂಬಂಧಿ ಅವಘಡದಲ್ಲಿ ಮತ್ತೆ ಇಬ್ಬರು ಬಲಿಯಾಗಿದ್ದಾರೆ. ಈ ಮೂಲಕ ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಗೆ ಮೂವರು ಸಾವನ್ನಪಿದವರ ಸಂಖ್ಯೆ 3 ಕ್ಕೆ ಏರಿಕೆಯಾಗಿದೆ.

ಮಳೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಇಬ್ಬರು ಕಾಲು ಜಾರಿ ಬಿದ್ದು ಸಾವು ಕಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಬರ್ಗಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಟ್ಕುಳಿ ಗ್ರಾಮದಲ್ಲಿ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೃತರನ್ನು ಸತೀಶ ಪಾಂಡುರಂಗ ನಾಯ್ಕ (40), ಉಲ್ಲಾಸ ಗಾವಡಿ (50) ಎಂದು ಗುರುತಿಸಲಾಗಿದೆ. ನೀರಿನ ಆರ್ಭಟಕ್ಕೆ ಇಬ್ಬರ ಶವ ತೇಲಿಕೊಂಡು ಹೋಗಿದ್ದು ಕೆಲವು ಗಂಟೆಗಳ ಹುಡುಕಾಟದ ಬಳಿಕ ಪತ್ತೆಯಾಗಿದೆ.ಘಟನೆ ಸಂಬಂಧ ಗೋಕರ್ಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular