HomeKarnatakaSHOCKING: ಮಕ್ಕಳಾಗದ ಹಿನ್ನಲೆ ಕತ್ತು ಕೊಯ್ದುಕೊಂಡು ಮಹಿಳೆ ಆತ್ಮಹತ್ಯೆ

SHOCKING: ಮಕ್ಕಳಾಗದ ಹಿನ್ನಲೆ ಕತ್ತು ಕೊಯ್ದುಕೊಂಡು ಮಹಿಳೆ ಆತ್ಮಹತ್ಯೆ

ಯಾದಗಿರಿ: ಮಕ್ಕಳಾಗದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಯಾದಗಿರಿಯ ಚಿರಂಜೀವಿ ನಗರದಲ್ಲಿ ನಡೆದಿದೆ.

38 ವರ್ಷದ ತಾಯಮ್ಮ ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಎಂದು ಹೇಳಲಾಗಿದೆ. ಮಕ್ಕಳಾಗದ ಕಾರಣ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಅವರು ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅವರಿಗೆ 8 ವರ್ಷಗಳ ಹಿಂದೆ ಸೋದರ ಮಾವನ ಜೊತೆ ಮದುವೆಯಾಗಿತ್ತು. ಆದರೆ ಮಕ್ಕಳಾಗಿಲ್ಲ ಎಂಬ ಕೊರಗು ಇತ್ತು. ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಯಾದಗಿರಿ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular