HomeKarnatakaBIG NEWS: ಬಿಜೆಪಿ ಕುತಂತ್ರಕ್ಕೆ ಖಂಡನೆ; ಮಧ್ಯಾಹ್ನ 3 ಗಂಟೆಗೆ ಕಾಂಗ್ರೆಸ್ ಶಾಸಕರಿಗೆ ಪ್ರತಿಭಟನೆಗೆ ಕರೆ...

BIG NEWS: ಬಿಜೆಪಿ ಕುತಂತ್ರಕ್ಕೆ ಖಂಡನೆ; ಮಧ್ಯಾಹ್ನ 3 ಗಂಟೆಗೆ ಕಾಂಗ್ರೆಸ್ ಶಾಸಕರಿಗೆ ಪ್ರತಿಭಟನೆಗೆ ಕರೆ ನೀಡಿದ ಡಿಸಿಎಂ

ಬೆಂಗಳೂರು: ಗುಜರಾತ್ ಕೋರ್ಟ್ ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಅರ್ಜಿ ವಜಾಗೊಂಡಿದೆ. ಇದು ಬಿಜೆಪಿ ಕುತಂತ್ರವಾಗಿದ್ದು, ಬಿಜೆಪಿ ಕುತಂತ್ರವನ್ನು ನಾವು ಖಂಡಿಸುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ಕೇಸ್ ಗೆ ಸಂಬಂಧಿಸಿದಂತೆ ಗುಜರಾತ್ ನ ಸೂರತ್ ಕೋರ್ಟ್ ವಿಧಿಸಿದ್ದ 2 ವರ್ಷ ಜೈಲು ಶಿಕ್ಷೆ ಪ್ರಶ್ನಿಸಿ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಡಿ.ಕೆ.ಶಿವಕುಮಾರ್, ಬಿಜೆಪಿಯ ಕುತಂತ್ರವನ್ನು ನಾವು ಖಂಡಿಸುತ್ತೇವೆ. ನಾವು ರಾಹುಲ್ ಗಾಂಧಿ ಪರ ನಿಲ್ಲುತ್ತೇವೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಂದು ಮಧ್ಯಾಹ್ನ 3 ಗಂಟೆಗೆ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್ ಶಾಸಕರು ಪ್ರತಿಭಟನೆ ನಡೆಸಲಿದ್ದಾರೆ. ರಾಜ್ಯದ ಜಿಲ್ಲೆ ಜಿಲ್ಲೆಗಳಲ್ಲಿಯೂ ಬಿಜೆಪಿ ಕುತಂತ್ರದ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.

 

For Latest News Updates, Join Our Whatsapp Community🚩
RELATED ARTICLES

Most Popular