HomeIndiaBREAKING: ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ, ಇತರರ 52 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

BREAKING: ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ, ಇತರರ 52 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

ನವದೆಹಲಿ: ದೆಹಲಿ ಮದ್ಯ ನೀತಿಯಲ್ಲಿ ಜೈಲು ಪಾಲಾಗಿರುವ ಆಮ್ ಆದ್ಮಿ ಪಕ್ಷದ ನಾಯಕ ಮನೀಶ್ ಸಿಸೋಡಿಯಾ ಮತ್ತು ಇತರ ಆರೋಪಿಗಳ 52 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯವು ಜಪ್ತಿ ಮಾಡಿದೆ.

ವಶಪಡಿಸಿಕೊಂಡ ಸ್ವತ್ತುಗಳಲ್ಲಿ ಅಮನದೀಪ್ ಸಿಂಗ್ ಧಾಲ್, ರಾಜೇಶ್ ಜೋಶಿ, ಗೌತಮ್ ಮಲ್ಹೋತ್ರಾ ಮತ್ತು ಕೆಲವರ ಆಸ್ತಿ ಸೇರಿದೆ. ಸಿಸೋಡಿಯಾ ಮತ್ತು ಅವರ ಪತ್ನಿ ಸೀಮಾ ಅವರ ಎರಡು ಆಸ್ತಿಗಳು ಮತ್ತು ಅವರ ಬ್ಯಾಂಕ್ ಖಾತೆಗಳಲ್ಲಿ 11 ಲಕ್ಷ ರೂ. ವಶಪಡಿಸಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಿಸೋಡಿಯಾ ಅವರ ನಿಕಟವರ್ತಿ ದಿಲ್ಲಿಯ ಉದ್ಯಮಿ ದಿನೇಶ್ ಅರೋರಾ ಅವರನ್ನು ಬಂಧಿಸಿದ ಒಂದು ದಿನದ ನಂತರ ಜಾರಿ ನಿರ್ದೇಶನಾಲಯ ಈ ಕ್ರಮ ಜರುಗಿಸಿದೆ. ದೆಹಲಿಯ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದ ಇಡಿ ಪ್ರಕರಣವು ಕೇಂದ್ರೀಯ ತನಿಖಾ ದಳ(ಸಿಬಿಐ) ತನಿಖೆ ನಡೆಸುತ್ತಿರುವ ಪ್ರಕರಣಕ್ಕಿಂತ ಪ್ರತ್ಯೇಕವಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular