HomeCrimeಆಶ್ರಮದಿಂದ ನಾಪತ್ತೆಯಾಗಿದ್ದ ಜೈನ ಮುನಿ ಬರ್ಬರ ಹತ್ಯೆ

ಆಶ್ರಮದಿಂದ ನಾಪತ್ತೆಯಾಗಿದ್ದ ಜೈನ ಮುನಿ ಬರ್ಬರ ಹತ್ಯೆ

ಬೆಳಗಾವಿ: ಹೀರೆಕೋಡಿ ಗ್ರಾಮದಿಂದ ನಾಪತ್ತೆಯಾಗಿದ್ದ ಜೈನ ಮುನಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿ ಪರ್ವತ ಆಶ್ರಮದ ಆಚಾರ್ಯ ಕಾಮಕುಮಾರ ನಂದಿ ಮಹಾರಾಜರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಪೊಲೀಸರು ಅನುಮಾನದ ಮೇಲೆ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ತನಿಖೆ ವೇಳೆ ಜೈನ ಮುನಿ ಹತ್ಯೆ ರಹಸ್ಯ ಬಯಲಾಗಿದೆ. ಜುಲೈ 6ರಿಂದ ನಂದಿ ಪರ್ವತ ಆಶ್ರಮದಿಂದ ಜೈನ ಮುನಿ ನಾಪತ್ತೆಯಾಗಿದ್ದರು. ನಿನ್ನೆ ಚಿಕ್ಕೋಡಿ ಠಾಣೆಗೆ ಜೈನ ಮುನಿ ನಾಪತ್ತೆಯಾದ ಬಗ್ಗೆ ದೂರು ನೀಡಲಾಗಿದ್ದು, ಆಚಾರ್ಯ ಕಾಮಕುಮಾರ ನಂದಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಭೀಮಪ್ಪ ಉಗಾರೆ ದೂರು ನೀಡಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜೈನ ಮುನಿಯನ್ನು ಹತ್ಯೆ ಮಾಡಿರುವುದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ. ಆದರೆ ಇನ್ನೂ ಮೃತ ದೇಹ ಪತ್ತೆಯಾಗಿಲ್ಲ. ಕೊಲೆ ಬಳಿಕ ಶವ ಬಿಸಾಕಿರುವ ಬಗ್ಗೆ ಗೊಂದಲದ ಹೇಳಿಕೆ ನೀಡಿದ್ದಾರೆ. ಎಲ್ಲಿ ಶವ ಹಾಕಿದ್ದೇವೆ ಎಂದು ಆರೋಪಿಗಳು ಸ್ಪಷ್ಟ ಮಾಹಿತಿ ನೀಡಿಲ್ಲ. ಶವ ಕತ್ತರಿಸಿ ಕೊಳವೆ ಬಾವಿಗೆ ಎಸೆದಿದ್ದೇವೆ ಎಂದು ಹೇಳಿದ್ದಾರೆ. ಖಟಕಬಾವಿ ಗ್ರಾಮದ ಗದ್ದೆಯ ಕೊಳವೆ ಬಾವಿಯಲ್ಲಿ ಹಾಕಿರುವುದಾಗಿ ಒಮ್ಮೆ, ನದಿಯಲ್ಲಿ ಎಸೆದಿರುವುದಾಗಿ ಮತ್ತೊಮ್ಮೆ ಹೇಳಿದ್ದು, ಪೊಲೀಸರು ಮೃತದೇಹಕ್ಕಾಗಿ ಹುಡುಕಾಟ ನಡೆಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular