ಬೆಂಗಳೂರು : ಸಿಎಂ ಸಿದ್ದರಾಮಯ್ಯ ಶುಕ್ರವಾರ ದಾಖಲೆಯ 14 ನೇ ಬಾರಿಗೆ ಬಜೆಟ್ ಮಂಡನೆ ಮಾಡಿದ್ದು, ಬಿಜೆಪಿ ಸರ್ಕಾರದ 17 ಯೋಜನೆಗಳನ್ನು ಬಜೆಟ್ ನಲ್ಲಿ ಕೈಬಿಟ್ಟಿದ್ದಾರೆ.
ಬಿಜೆಪಿ ಸರ್ಕಾರದಲ್ಲಿ ಜಾರಿಗೊಳಿಸಿದ್ದ ಎನ್ ಇಪಿ, ವಿದ್ಯಾನಿಧಿ, ಜಿಲ್ಲೆಗೊಂದು ಗೋಶಾಲೆ, ಎಪಿಎಂಸಿ ತಿದ್ದುಪಡಿ ಕಾಯ್ದೆ, ನಮ್ಮ ಕ್ಲಿನಿಕ್ ಸೇರಿದಂತೆ 17 ಕ್ಕೂ ಹೆಚ್ಚು ಯೋಜನೆಗಳನ್ನು ಸಿದ್ದರಾಮಯ್ಯ ಸರ್ಕಾರ ಕೈಬಿಟ್ಟಿದೆ.
ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಾಡಿದ್ದ ಪಠ್ಯಪರಿಷ್ಕರಣೆ, ರೈತರ, ಮೀನುಗಾರರ, ಟ್ಯಾಕ್ಸಿ ಚಾಲಕರು ಸೇರಿದಂತೆ ಇತರೆ ವರ್ಗದ ಮಕ್ಕಳ ಉನ್ನತ ವಿದ್ಯಾಭ್ಯಾಸಕ್ಕೆ ಆರ್ಥಿಕ ನೆರವು ನೀಡುತ್ತಿದ್ದ ವಿದ್ಯಾನಿಧಿ ಯೋಜನೆಯನ್ನೂ ಸಹ ರಾಜ್ಯ ಸರ್ಕಾರ ಸ್ಥಗಿತಗೊಳಿಸಿದೆ.
ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆ, ಭೂಸಿರಿ ಯೋಜನೆ, ಜಿಲ್ಲೆಗೊಂದು ಗೋಶಾಲೆ ಯೋಜನೆ, ನಮ್ಮ ಕ್ಲಿನಿಕ್ ಯೋಜನೆ, ಮಹಿಳಾ ಸ್ತ್ರೀ ಸಾಮಾರ್ಥ್ಯ ಯೋಜನೆ, ಕೃಷಿ ಭೂಮಿ ತಿದ್ದುಪಡಿ ಕಾಯ್ದೆ ಸೇರಿದಂತೆ ಹಲವು ಯೋಜನೆಗಳಿಗೆ ಸಿದ್ದರಾಮಯ್ಯ ಸರ್ಕಾರ ಕೊಕ್ ನೀಡಿದೆ.