ಬೆಂಗಳೂರು : ಉದ್ಯೋಗಕ್ಕೆ ತೆರಳುವ ಮಹಿಳೆಯರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಉದ್ಯೋಗಿ ಮಹಿಳೆಯರ 6 ವರ್ಷದೊಳಗಿನ ಮಕ್ಕಳಿಗಾಗಿ `ಕೂಸಿನ ಮನೆ’ ಹೆಸರಿನಲ್ಲಿ ಶಿಶುಪಾಲನಾ ಕೇಂದ್ರಗಳನ್ನು ಸ್ಥಾಪನೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಣೆ ಮಾಡಿದ್ದಾರೆ.
ಉದ್ಯೋಗಕ್ಕೆ ತೆರಳುವ ಮಹಿಳೆಯರ 6 ವರ್ಷದೊಳಗಿನ ಮಕ್ಕಳ ಆರೋಗ್ಯ, ಪೌಷ್ಠಿಕತೆ ಮತ್ತು ಸುರಕ್ಷತೆ ದೃಷ್ಟಿಯಿಂದ 4 ಸಾವಿರ ಗ್ರಾ.ಪಂಗಳಲ್ಲಿ ಕೂಸಿನ ಮನೆ ಹೆಸರಿನಲ್ಲಿ ಶಿಶುಪಾಲನಾ ಕೇಂದ್ರ ಸ್ಥಾಪನೆ ಮಾಡಲಾಗುವುದು ಎಂದು ಹೇಳಿದ್ದಾರೆ.
ಉದ್ಯಮ ಶಕ್ತಿ ಯೋಜನೆಯಡಿ 100 ಸ್ಥಳಗಳಲ್ಲಿ ಪೆಟ್ರೋಲ್ ಬಂಕ್ ಸ್ಥಾಪಿಸಿ ಅವುಗಳ ನಿರ್ವಹಣೆ ಹೊಣೆಯನ್ನು ಮಹಿಳಾ ಸಹಕಾರಿ ಸ್ವಸಹಾಯ ಗುಂಪುಗಳಿಗೆ ನೀಡುವ ಘೋಷಣೆ ಮಾಡಲಾಗಿದೆ. ಕೃಷಿ ಕ್ಷೇತ್ರಕ್ಕೆ ನವೋದ್ಯಮ, ಅಹಿಂದ ವರ್ಗದ ನಿರುದ್ಯೋಗಿ ಯುವಜನರಿಗೆ ಸ್ವವಲಂಬಿ ಸಾರಥಿ ಯೋಜನೆ ಮೂಲಕ ನೆರವು, ಸ್ಮಶಾನ ಭೂಮಿಗಳ ಕೊರತೆ ನೀಗಿಸಲು ಶಾಂತಿಧಾಮ ಯೋಜನೆ ಘೋಷಿಸಲಾಗಿದೆ.