ಬೆಂಗಳೂರು : ರೈತರಿಗೆ ಸಿಎಂ ಸಿದ್ದರಾಮಯ್ಯ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಕೃಷಿಯೇತರ ಉದ್ದೇಶಕ್ಕಾಗಿ ಭೂ ಪರಿವರ್ತನೆ ಮಾಡಲು ಅವಕಾಶ ನೀಡಲಾಗಿದೆ.
ಕರ್ನಾಟಕ ಭೂಕಂದಾಯ ಕಾಯ್ದೆ ಕಾಯ್ದೆ 95ಕ್ಕೆ ತಿದ್ದುಪಡಿ ತಂದು ಜಮೀನನ್ನು ಸ್ವಯಂ ಘೋಷಣೆ ಮೂಲಕ ಕೃಷಿಯೇತರ ಉದ್ದೇಶಕ್ಕೆ ಭೂ ಪರಿವರ್ತನೆ ಮಾಡಲು ಅವಕಾಶ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮಂಜೂರಾದ ಜಮೀನು ಪುನರ್ ಸ್ಥಾಪನೆಗೆ ಮನವಿ ಸಲ್ಲಿಕೆ ಕಾಲಮಿತಿಯನ್ನು ಕಾಯ್ದೆಯಲ್ಲಿಯೇ ನಿಗದಿಪಡಿಸಲು ಭೂಮಿ ಪರಭಾರೆ ನಿಷೇಧ ಅಧಿನಿಯಮ 1978 ಕ್ಕೆ ತಿದ್ದುಪಡಿ ತರಲು ನಿರ್ಧರಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.