HomeCrimeBIG NEWS: ಜೈನ ಮುನಿ ಭೀಕರ ಹತ್ಯೆ; ಮೃತದೇಹಕ್ಕಾಗಿ ಪೊಲೀಸರ ಹುಡುಕಾಟ

BIG NEWS: ಜೈನ ಮುನಿ ಭೀಕರ ಹತ್ಯೆ; ಮೃತದೇಹಕ್ಕಾಗಿ ಪೊಲೀಸರ ಹುಡುಕಾಟ

ಬೆಳಗಾವಿ: ಜೈನಮುನಿಯೊಬ್ಬರನ್ನು ಬರ್ಬರವಾಗಿ ಹತ್ಯೆಗೈದು ಕೊಳವೆ ಬಾವಿಗೆ ಬಿಸಾಕಿರುವ ಘೋರ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನಲ್ಲಿ ನಡೆದಿದೆ.

ಇಲ್ಲಿನ ಹಿರೇಕೋಡಿ ಗ್ರಾಮದ ನಂದಿಪರ್ವತ ಆಶ್ರಮದ ಜೈನಮುನಿ ಆಚಾರ್ಯ ಕಾಮಕುಮಾರ ನಂದಿ ಮಹಾರಾಜರನ್ನು ಹತ್ಯೆ ಮಾಡಿರುವ ದುಷ್ಕರ್ಮಿಗಳು ಶವನ್ನು ನಾಪತ್ತೆ ಮಾಡಿದ್ದಾರೆ. ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಜೈನಮುನಿ ಮೃತದೇಹಕ್ಕಾಗಿ ಪೊಲೀಸರು ಶೋಧ ತೀವ್ರಗೊಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಖಟಕಬಾವಿ ಗ್ರಾಮದ ಹೊರವಲಯದ ಗದ್ದೆಗಳಲ್ಲಿ ಹುಡುಕಾಟ ನಡೆಸಿದ್ದರು. ಇದೀಗ ಕೊಳವೆಬಾವಿಯಲ್ಲಿ ಮುನಿಯ ಶವ ಹಾಕಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular