HomeKarnatakaರಾಮನಗರದಲ್ಲೂ `ವಂದೇ ಭಾರತ್ ಎಕ್ಸ್ ಪ್ರೆಸ್’ ಗೆ ಕಿಡಿಗೇಡಿಗಳಿಂದ ಕಲ್ಲೆಸೆತ!

ರಾಮನಗರದಲ್ಲೂ `ವಂದೇ ಭಾರತ್ ಎಕ್ಸ್ ಪ್ರೆಸ್’ ಗೆ ಕಿಡಿಗೇಡಿಗಳಿಂದ ಕಲ್ಲೆಸೆತ!

ರಾಮನಗರ:  ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಕಿಡಿಗೇಡಿಗಳು ಕಲ್ಲೆಸೆದಿರುವ ಘಟನೆ ರಾಮನಗರ ತಾಲೂಕಿನ ವಡೇರಹಳ್ಳಿ ಬಳಿ ನಡೆದಿದೆ.

ಮೈಸೂರಿನಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಮಧ್ಯಾಹ್ನ 2.20ಕ್ಕೆ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ. ರೈಲಿನ ಕಿಟಕಿ ಗಾಜುಗಳು ಪುಡಿಯಾಗಿವೆ. ಕೃತ್ಯ ನಡೆದ ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಿಡಿಗೇಡಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಮೈಸೂರು ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇತ್ತೀಚೆಗೆ ನೂತನವಾಗಿ ಸಂಚಾರ ಆರಂಭಿಸಿದ್ದ ಧಾರವಾಡ ಬೆಂಗಳೂರು ವಂದೇ ಭಾರತ್ ಎಕ್ಸ್​ಪ್ರೆಸ್ ರೈಲಿಗೆ ಎರಡು ದಿನಗಳ ಹಿಂದಷ್ಟೇ ಚಿಕ್ಕಮಗಳೂರಿನಲ್ಲಿ ಕಿಡಿಗೇಡಿಗಳು ಕಲ್ಲೆಸೆದಿದ್ದರು. ಇದೀಗ ರಾಮನಗರದಲ್ಲೂ ಕಿಡಿಗೇಡಿಗಳು ಕಲ್ಲೆಸೆದಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular