ಬೆಳಗಾವಿ : ಬೆಳಗಾವಿ ಜಿಲ್ಲೆಯ ಹಿರೇಕೋಟಿ ಗ್ರಾಮದ ನಂದಿಪರ್ವತ ಆಶ್ರಮದ ಜೈನಮುನಿ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಸ್ವಾಮೀಜಿ ಆಪ್ತನೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಜೈನಮುನಿ ಆಚಾರ್ಯ ಶ್ರೀ ಕಾಮಕುಮಾರ ನಂದಿ ಮಹಾರಾಜ ಅವರ ಜೊತೆಗೆ ಒಡನಾಡ ಹೊಂದಿದ್ದ ಆರೋಪಿ ಸ್ವಾಮೀಜಿ ಬಳಿ ಲಕ್ಷಾಂತರ ರೂ. ಸಾಲ ಪಡೆದುಕೊಂಡಿದ್ದ ಬಳಿಕ ಹಣದ ವ್ಯವಹಾರದಲ್ಲಿ ಮನಸ್ತಾಪಗಳಿಂದ ಸ್ವಾಮಿಯನ್ನು ಆರೋಪಿ ನಂದಿ ಪರ್ವತ ಆಶ್ರಮದಲ್ಲೇ ಕೊಲೆ ಮಾಡಿರುವುದಾಗಿ ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.
ಸದ್ಯ ಪೊಲೀಸರು ಸ್ವಾಮೀಜಿ ಹತ್ಯೆ ಸಂಬಂಧ ಇಬ್ಬರನ್ನು ಬಂಧಿಸಲಾಗಿದ್ದು, ಅವರು ತಾವೇ ಸ್ವಾಮೀಜಿಯವರನ್ನು ಹತ್ಯೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. ಸ್ವಾಮೀಜಿ ಕೊಲೆ ಮಾಡಿ ಶವವನ್ನು ಸಂಬಂಧಿಕರ ತುಂಡು ಮಾಡಿ ಬಾವಿಗೆ ಎಸೆದಿರುವುದಾಗಿ ಹೇಳಿದ್ದಾರೆ ಎನ್ನಲಾಗಿದೆ.