HomeKarnatakaBREAKING : ಸಿದ್ದರಾಮಯ್ಯ ಬಜೆಟ್ `ಎಲ್ಲರಿಗೂ ಮದ್ಯ ಕುಡಿಸಿ ಹಣ ಕೊಡಿ ಅನ್ನೋ ಪ್ಲ್ಯಾನ್’ :...

BREAKING : ಸಿದ್ದರಾಮಯ್ಯ ಬಜೆಟ್ `ಎಲ್ಲರಿಗೂ ಮದ್ಯ ಕುಡಿಸಿ ಹಣ ಕೊಡಿ ಅನ್ನೋ ಪ್ಲ್ಯಾನ್’ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ

ಹುಬ್ಬಳ್ಳಿ : ಸಿಎಂ ಸಿದ್ದರಾಮಯ್ಯ ತುಷ್ಟೀಕರಣದ ಬಜೆಟ್ ಮಂಡನೆ ಮಾಡಿದ್ದಾರೆ. ಬಜೆಟ್ ನಲ್ಲಿ ಯಾವುದೇ ಅಭಿವೃದ್ಧಿ ಪೂರಕವಾದ ವಿಚಾರಗಳಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್ ಅಭಿವೃದ್ಧಿಗೆ ಪೂರಕವಾಗಿಲ್ಲ. ಮೂಲ ಸೌಲಭ್ಯಗಳು ನೆಲಕಚ್ಚುವಂತಿದೆ. ಶಾಸಕರಿಗೆ ಅನುದಾನ ಕೇಳಬೇಡಿ ಎಂದು ನೇರವಾಗಿ ಹೇಳಿದ್ದಾರೆ. ಕಾಂಗ್ರೆಸ್ ಗೆ ಯಾವ ಸ್ಥಿತಿ ಬಂದಿದೆ ಎಂಬುದು ಇದೆ ಸಾಕ್ಷಿ ಎಂದು ವಾಗ್ದಾಳಿ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯ ಸರ್ಕಾರದಲ್ಲಿ ಯುವನಿಧಿ ಯೋಜನೆಗೆ ನಯಾಪೈಸೆ ಹಣ ಇಲ್ಲ. ರೈಲು ಯೋಜನೆಗೆ ರಾಜ್ಯದ ಪಾಲಿನ ಹಣ ಮೀಸಲಿಟ್ಟಿಲ್ಲ.ರಾಜ್ಯವನ್ನು ಸಾಲದ ಕೂಪಕ್ಕೆ ತಳ್ಳುವ ಕೆಲಸ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ತಮ್ಮ ರಾಜಕೀಯ ಚಟ ತೀರಿಸಿಕೊಳ್ಳುತ್ತಿದ್ದಾರೆ. ಹಿಟ್ಲರ್ ರೀತಿ ಆಡಳಿತ ಮಾಡಲು ತೀರ್ಮಾನಿಸಿದ್ದಾರೆ. ಬಿಜೆಪಿಯನ್ನು ಬೈಯುವುದನ್ನೇ ಕೆಲಸ ಮಾಡಿಕೊಂಡಿದ್ದಾರೆ. ಸಿದ್ದರಾಮಯ್ಯ ಬಜೆಟ್ ಎಲ್ಲರಿಗೂ ಮದ್ಯ ಕುಡಿಸಿ ಹಣ ಕೊಡಿ ಅನ್ನೋ ಪ್ಲಾನ್ ಎಂದು ಕಿಡಿಕಾರಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular