HomeKarnatakaBIG NEWS: ಕಲಬುರಗಿ-ಬೀದರ್ ಪ್ಯಾಸೇಂಜರ್ ರೈಲಿನ ಮೇಲೆ ಕಲ್ಲು ತೂರಿದ ಕಿಡಿಗೇಡಿಗಳು : ಆಶಾ ಕಾರ್ಯಕರ್ತೆಗೆ...

BIG NEWS: ಕಲಬುರಗಿ-ಬೀದರ್ ಪ್ಯಾಸೇಂಜರ್ ರೈಲಿನ ಮೇಲೆ ಕಲ್ಲು ತೂರಿದ ಕಿಡಿಗೇಡಿಗಳು : ಆಶಾ ಕಾರ್ಯಕರ್ತೆಗೆ ಗಾಯ

ಕಲಬುರಗಿ: ಪ್ಯಾಸೇಂಜರ್ ರೈಲಿನ ಮೇಲೆ ಕಿಡಿಗೇಡಿಗಳು ಕಲ್ಲುತೂರಾಟ ನಡೆಸಿರುವ ಘಟನೆ ಕಲಬುರ್ಗಿಯ ಸುಲ್ತಾನಪುರ ರೈಲು ನಿಲ್ದಾಣದ ಬಳಿ ನಡೆದಿದೆ.

ಚಲಿಸುತ್ತಿದ್ದ ಕಲಬುರ್ಗಿ-ಬೀದರ್ ಪ್ಯಾಸೇಂಜರ್ ರೈಲಿನ ಮೇಲೆ ಕಿಡಿಗೇಡಿಗಳು ಕಲ್ಲುತೂರಾಟ ನಡೆಸಿದ್ದಾರೆ. ಘಟನೆಯಲ್ಲಿ ಓರ್ವ ಮಹಿಳೆಗೆ ಗಾಯಗಳಾಗಿವೆ. ಗಾಯಾಳುವನ್ನು ಸುಮಿತ್ರಾ ಎಂದು ಗುರುತಿಸಲಾಗಿದ್ದು, ಆಶಾ ಕಾರ್ಯಕರ್ತೆಯಾಗಿ ಕಾರನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ. ಗಾಯಾಳು ಮಹಿಳೆಗೆ ರೈಲಿನಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿನೆಯಷ್ಟೇ ರಾಮನಗರದ ವಡೇರಹಳ್ಲಿ ಬಳಿ ವಂದೇಭಾರತ್ ಎಕ್ಸ್ ಪ್ರೆಸ್ ರೈಲಿನ ಮೇಲೆ ಕಲ್ಲು ತೂರಾಟ ಪ್ರಕರಣ ನಡೆದಿತ್ತು. ಇದರ ಬೆನ್ನಲ್ಲೇ ಈಗ ಕಲಬುರ್ಗಿ-ಬೀದರ್ ಪ್ಯಾಸೇಂಜರ್ ರೈಲಿನ ಮೇಲೆ ಕಲ್ಲುತೂರಾಟ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular