ಬೆಂಗಳೂರು : ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಜುಲೈ 10 ರ ನಾಳೆಯಿಂದಲೇ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಮಾಡಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆಚ್ ಮುನಿಯಪ್ಪ ಹೇಳಿದ್ದಾರೆ.
ರಾಜ್ಯ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿಯ ಬದಲಾಗಿ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಮಾಡಲು ನಿರ್ಧರಿಸಲಾಗಿದ್ದು, ನಾಳೆಯಿಂದಲೇ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಪ್ರಕ್ರಿಯೆಗೆ ಚಾಲನೆ ಸಿಗಲಿದೆ ಎಂದು ತಿಳಿಸಿದ್ದಾರೆ.
ಜುಲೈ 10 ರ ನಾಳೆ ಸಂಜೆ ಸಿಎಂ ಸಿದ್ದರಾಮಯ್ಯ ಅವರು ಅನ್ನಭಾಗ್ಯ ಯೋಜನೆ ಫಲಾನುಭವಿಗಳ ಖಾತೆಗೆ ನೇರ ಹಣ ವರ್ಗಾವಣೆಗೆ ಚಾಲನೆ ನೀಡಲಿದ್ದಾರೆ. ರಾಜ್ಯದ 1.29 ಕೋಟಿ ಬಿಪಿಎಲ್ ಕಾರ್ಡ್ ಕುಟುಂಬಗಳ ಒಟ್ಟು 41 ಕೋಟಿ ಫಲಾನುಭವಿಗಳಿಗೆ ಹಣ ವರ್ಗಾವಣೆ ಮಾಡಲಾಗುತ್ತದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ನಾಳೆ ಬೆಳಗ್ಗೆ ವಿಧಾನಸೌಧಧ ಬ್ಯಾಂಕ್ವೆಟ್ ಹಾಳ್ ನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಅವರು 5 ಕೆಜಿ ಅಕ್ಕಿ ಬದಲಿಗೆ ಪ್ರತಿ ಪಡಿತರ ಫಲಾನುಭವಿಗಳಿಗೆ 170 ರೂ. ಪಾವತಿ ಮಾಡುವ ಕಾರ್ಯಕ್ಕೆ ಚಾಲನೆ ನೀಡಲಿದ್ದಾರೆ. ಆಧಾರ್ ಕಾರ್ಡ್ ನೊಂದಿಗೆ ಪಡಿತರ ಚೀಟಿ ಮತ್ತು ಬ್ಯಾಂಕ್ ಖಾತೆ ಲಿಂಕ್ ಆಗಿದ್ದ ಫಲಾನುಭವಿಗಳಿಗೆ ಹಣ ಸಂದಾಯ ಆಗಲಿದೆ. ಬ್ಯಾಂಕ್ ಖಾತೆ ಇಲ್ಲದವರು ಹೊಸದಾಗಿ ಖಾತೆ ಆರಂಭಿಸಿ ಅದರ ಬಗ್ಗೆ ಮಾಹಿತಿ ನೀಡಬೇಕು.