ಮೈಸೂರು: ರೈತರಿಂದ ಖರೀದಿಸುವ ಹಾಲಿನ ದರ ಹೆಚ್ಚಳ ಮಾಡಲು ಚಿಂತನೆ ನಡೆದಿದೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ.
ಮೈಸೂರು ಭಾಗದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಹಾಲು ಒಕ್ಕೂಟಗಳ ವ್ಯವಸ್ಥಾಪಕ ನಿರ್ದೇಶಕರು ಹಾಲಿನ ದರ ಹೆಚ್ಚಳ ಬೇಡಿಕೆ ಮುಂದಿಟ್ಟಿದ್ದಾರೆ. ಈ ಸಂದರ್ಭ ಮಾತನಾಡಿದ ಸಚಿವರು, ರೈತರಿಂದ ಖರೀದಿಸುವ ಹಾಲಿನ ದರ ಹೆಚ್ಚಳ ಮಾಡಬೇಕೆ ಅಥವಾ ಗ್ರಾಹಕರಿಗೆ ಸರಬರಾಜು ಮಾಡುವ ಹಾಲಿನ ದರ ಹೆಚ್ಚಳ ಮಾಡಬೇಕೆ ಎಂಬುದನ್ನು ನಿರ್ಧರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಪಶು ಆಹಾರ, ಮೇವಿನ ದರ ಹೆಚ್ಚಳವಾದ ಕಾರಣ ಹೈನುಗಾರರು ಸಂಕಷ್ಟ ಎದುರಿಸುವಂತಹಾಗಿದ್ದು, ಈ ಹಿನ್ನೆಲೆಯಲ್ಲಿ ರೈತರಿಂದ ಖರೀದಿಸುವ ಹಾಲಿನ ದರ ಹೆಚ್ಚಳಕ್ಕೆ ಚಿಂತನೆ ನಡೆದಿದೆ. ಗ್ರಾಹಕರು ಖರೀದಿಸುವ ಹಾಲಿನ ದರ ಹೆಚ್ಚಳ ಮಾಡಿ ಅದರಿಂದ ಬರುವ ಆದಾಯವನ್ನು ಉತ್ಪಾದಕರಿಗೆ ನೀಡಲಾಗುವುದು. ಈ ಬಗ್ಗೆ ರೈತರು ಮತ್ತು ಗ್ರಾಹಕರಿಗೆ ಯಾವುದೇ ತೊಂದರೆಯಾದಂತೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.