ಬೆಂಗಳೂರು : ಗ್ಯಾರಂಟಿ ಯೋಜನೆಗಳ ಬಳಿಕ ರಾಜ್ಯ ಸರ್ಕಾರಕ್ಕೆ ಮತ್ತೊಂದು ತಲೆಬಿಸಿ ಶುರುವಾಗಿದ್ದು, ಆಶಾ ಕಾರ್ಯಕರ್ತರ ಗೌರವಧನವನ್ನು 5 ಸಾವಿರ ರೂ.ನಿಂದ 8 ಸಾವಿರ ರೂ.ಗೆ ಹೆಚ್ಚಿಸಬೇಕೆಂದು ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತರ ಸಂಘ ಆಗ್ರಹಿಸಿದೆ.
ಸಿಎಂ ಸಿದ್ದರಾಮಯ್ಯ ಶುಕ್ರವಾರ ಮಂಡಿಸಿದ ಬಜೆಟ್ ನಲ್ಲಿ ಆಶಾ ಕಾರ್ಯಕರ್ತರ ಗೌರವ ಧನ ಹೆಚ್ಚಳ ಮಾಡಿಲ್ಲ. ಹೀಗಾಗಿ ರಾಜ್ಯ ಸರ್ಕಾರವು ಆಶಾ ಕಾರ್ಯಕರ್ತರ ಸೇವೆಯನ್ನು ಪರಿಗಣಿಸಿ ಕೂಡಲೇ ಗೌರವಧನ ಹೆಚ್ಚಿಸಬೇಕು ಎಂದು ಒತ್ತಾಯಿಸಲಾಗಿದೆ.
ಗೃಹಲಕ್ಷ್ಮೀ ಯೋಜನೆಯಡಿ ಆಶಾ ಕಾರ್ಯಕರ್ತರು ಅಂಗನವಾಡಿ, ಬಿಸಿಯೂಟ ಕಾರ್ಯಕರ್ತರಿಗೆ ಪ್ರತಿ ತಿಂಗಳು ತಲಾ 2 ಸಾವಿರ ರು. ನೀಡುವುದಾಗಿ ಹೇಳಲಾಗಿತ್ತು. ಮನೆಯ ಯಜಮಾನಿ ಬೇರೆಯವರು ಇದ್ದರೆ ಆಶಾ ಕಾರ್ಯಕರ್ತೆಯರು ಯೋಜನೆ ಲಾಭ ಪಡೆಯಬಹುದಾ? ಎಂದು ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದ್ದಾರೆ.