HomeKarnatakaಅಮರನಾಥದಲ್ಲಿ ಹವಾಮಾನ ವೈಪರೀತ್ಯ : ಸಂಕಷ್ಟದಲ್ಲಿರುವ 80 ಕನ್ನಡಿಗರ ರಕ್ಷಣೆಗೆ ಕ್ರಮ-ಡಿಸಿಎಂ ಡಿಕೆಶಿ

ಅಮರನಾಥದಲ್ಲಿ ಹವಾಮಾನ ವೈಪರೀತ್ಯ : ಸಂಕಷ್ಟದಲ್ಲಿರುವ 80 ಕನ್ನಡಿಗರ ರಕ್ಷಣೆಗೆ ಕ್ರಮ-ಡಿಸಿಎಂ ಡಿಕೆಶಿ

ಬೆಂಗಳೂರು : ಅಮರನಾಥ ಯಾತ್ರೆಗೆ ತೆರಳುವ ಮಾರ್ಗ ಮಧ್ಯೆ ಭಾರಿ ಮಳೆಯಿಂದಾಗಿ ಗುಡ್ಡ ಕುಸಿತ ಉಂಟಾಗಿದ್ದು, ಕರ್ನಾಟಕದ 80 ಯಾತ್ರಾರ್ಥಿಗಳು ಮಾರ್ಗ ಮಧ್ಯೆ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಹವಾಮಾನ ವೈಪರೀತ್ಯದಿಂದ ಪವಿತ್ರ ಅಮರನಾಥ ಯಾತ್ರೆಗೆ ತೆರಳಿದ್ದ ಗದಗ ಜಿಲ್ಲೆಯ 23ಮಂದಿ ಸೇರಿದಂತೆ ಒಟ್ಟು 80 ಕನ್ನಡಿಗರು ಸಂಕಷ್ಟದಲ್ಲಿ ಸಿಲುಕಿರುವ ವಿಷಯವನ್ನು ನಮ್ಮ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು ಸಂಕಷ್ಟದಲ್ಲಿ ಸಿಲುಕಿರುವ ಎಲ್ಲರನ್ನೂ ಸುರಕ್ಷಿತವಾಗಿ ವಾಪಸ್ ಕರೆತರುವ ವ್ಯವಸ್ಥೆ ಮಾಡಲಾಗಿದ್ದು, ಈ ಸಂಬಂಧ ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗದಗ ಜಿಲ್ಲೆಯ 23 ಮಂದಿ ಸೇರಿದಂತೆ ಒಟ್ಟು 80 ಮಂದಿ ಜುಲೈ 4ರಂದು ಅಮರನಾಥ ದರ್ಶನಕ್ಕೆ ತೆರಳಿದ್ದರು. ದರ್ಶನ ಪಡೆದು ಶುಕ್ರವಾರ ವಾಪಸ್ ತೆರಳುವ ಸಂದರ್ಭದಲ್ಲಿ ಭಾರಿ ಮಳೆಯಿಂದಾಗಿ ಮಾರ್ಗಮಧ್ಯೆ ಗುಡ್ಡ ಕುಸಿತವಾಗಿದೆ. ಬೇಸ್ ಕ್ಯಾಂಪ್ ನಲ್ಲಿ ಆಶ್ರಯ ಪಡೆದು ಯಾತ್ರೆಗಳು ಸುರಕ್ಷಿತವಾಗಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular