ಹುಬ್ಬಳ್ಳಿ : ಕಲಘಟಗಿ ಮಾಜಿ ಶಾಸಕ ಸಿಎಂ ನಿಂಬಣ್ಣವರ್ (76) ಇಂದು ನಿಧನರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಶಾಸಕ ಸಿಎಂ ಸಿಂಬಣ್ಣವರ್ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಅಪೋಲೋ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ 11:10 ಕ್ಕೆ ಕೊನೆಯುಸಿರೆಳೆದಿದ್ದು, ಇಂದು ಕಲಘಟಗಿಗೆ ಪಾರ್ಥಿವ ಶರೀರ ರವಾನೆಯಾಗುತ್ತಿದೆ ಎಂದು ಮೂಲಗಳು ತಿಳಿಸಿದೆ. ನಾಳೆ ಸಂಜೆ 3 ಗಂಟೆಗೆ ಅಂತ್ಯಸಂಸ್ಕಾರ ನಡೆಯಲಿದೆ. 1947ರಲ್ಲಿ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಸಂಗೇದೇವರಕೊಪ್ಪ ಗ್ರಾಮದ ರೈತ ಕುಟುಂಬದಲ್ಲಿ ಜನಿಸಿದ್ದ ಇವರು 1995 ರಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದರು. 2018ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಗೆಲುವು ಸಾಧಿಸಿದ್ದರು.