HomeKarnatakaಜೈನಮುನಿ ಬರ್ಬರ ಹತ್ಯೆ : ಸಿಎಂ ವಿರುದ್ಧ ಜೈನಮುನಿ ಗುಣಧರನಂದಿ ಮಹಾರಾಜ ಸ್ವಾಮೀಜಿ ಅಸಮಾಧಾನ

ಜೈನಮುನಿ ಬರ್ಬರ ಹತ್ಯೆ : ಸಿಎಂ ವಿರುದ್ಧ ಜೈನಮುನಿ ಗುಣಧರನಂದಿ ಮಹಾರಾಜ ಸ್ವಾಮೀಜಿ ಅಸಮಾಧಾನ

ಬೆಳಗಾವಿ : ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿಪರ್ವತ ಆಶ್ರಮದ ಜೈನಮುನಿ ಆಚಾರ್ಯ ಕಾಮಕುಮಾರ ನಂದಿ ಮಹಾರಾಜರ ಬರ್ಬರ ಹತ್ಯೆ ಪ್ರಕರಣ ಸಂಬಂಧ ಜೈನ ಮುನಿ ಗುಣಧರನಂದಿ ಮಹಾರಾಜ ಸ್ವಾಮೀಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೈನಮುನಿ ಸ್ವಾಮೀಜಿಯನ್ನು ಭಾರತದಲ್ಲಿ ಉಗ್ರರಿಗೆ ನೀಡುವ ಶಿಕ್ಷೆಗಿಂತ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಇಂತಹ ಪೈಶಾಚಿಕ ಕೃತ ನಡೆದರೂ ಸಿಎಂ ಸ್ಪಂದನೆ ಸಿಕ್ಕಿಲ್ಲ ಸಿಎಂ ಸಿದ್ದರಾಮಯ್ಯ ವಿರುದ್ಧ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜೈನ ಮುನಿ ಹತ್ಯೆ ಪ್ರಕರಣ ಸಂಬಂಧ ರಾಯಬಾಗ ತಾಲೂಕಿನ ಕಾಟಕಬಾವಿ ಗ್ರಾಮದ ನಾರಾಯಣ ಮಾಳಿ, ಹಸನ್ ಡಾಲಾಯತ್ ಎಂಬುವರನ್ನು ಬಂಧಿಸಲಾಗಿದೆ. ಪ್ರಕರಣ ದಾಖಲಾಗಿ 4 ಗಂಟೆಗೊಳಗಾಗಿ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸಲಾಗುತ್ತಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular