ಮೈಸೂರು: ಇಂದು ಅಧಿದೇವತೆ ತಾಯಿ ಚಾಮುಂಡೇಶ್ವರಿ ವರ್ಧಂತಿ ಉತ್ಸವ ನಡೆಯಲಿದ್ದು, ಭಕ್ತರಿಗೆ ಬೆಳಿಗ್ಗೆ 8 ಗಂಟೆಯ ನಂತರ ದರ್ಶನಕ್ಕೆ ಅವಕಾಶ ನೀಡಲಾಗಿದೆ.
ದೇವಾಲಯದ ಇಒ ಆದೇಶ ಹೊರಡಿಸಿದ್ದು, ಇಂದು ಎಲ್ಲಾ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಮೈಸೂರು ಜಿಲ್ಲಾಡಳಿತದಿಂದ ಬೆಟ್ಟಕ್ಕೆ ಬರುವ ಭಕ್ತರಿಗೆ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ. ಲಲಿತ ಮಹಲ್ ಮೈದಾನದಿಂದ ಬಳಕೆ 9 ಗಂಟೆಗೆ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.
ಮುಂಜಾನೆ 3.30 ರಿಂದಲೇ ಕುಂಕುಮಾರ್ಚನೆ, ಪಂಚಾಮೃತ ಅಭಿಷೇಕ ನೆರವೇರಿಸಲಾಗಿದೆ. ಬೆಳಗ್ಗೆ 10 ಗಂಟೆಗೆ ಚಾಮುಂಡಿ ಬೆಟ್ಟದಲ್ಲಿ ವದ್ದಂತಿ ಉತ್ಸವ ನಡೆಯಲಿದೆ. ಯದು ವಂಶದ ಪ್ರಮೋದಾದೇವಿ ಒಡೆಯರ್, ಯದುವೀರ ಕೃಷ್ಣದತ್ತ ಒಡೆಯರ್, ರಿಷಿಕಾ ಕುಮಾರಿ, ಆದ್ಯವೀರ ಒಡೆಯರ್ ಹಾಗೂ ಲಕ್ಷಾಂತರ ಭಕ್ತರು ಭಾಗಿಯಾಗಲಿದ್ದಾರೆ.