ಶ್ರೀನಗರ: ಪ್ರತಿಕೂಲ ಹವಾಮಾನದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭವಾಗಿದೆ.
ಅಮರನಾಥದಲ್ಲಿ ಹವಾಮಾನ ಸ್ಥಿತಿ ಸುಧಾರಿಸಿರುವ ಹಿನ್ನೆಲೆಯಲ್ಲಿ ಯಾತ್ರೆ ಪುನರಾರಂಭವಾಗಿದೆ. ಯಾತ್ರಿಕರು ಬಾಲ್ಟಾಲ್ ಬೇಸ್ ನಿಂದ ಯಾತ್ರೆಯನ್ನು ಆರಂಭಿಸಿದ್ದಾರೆ. ಇನ್ನು ಹೆಲಿಕಾಪ್ಟರ್ ಮೂಲಕವೇ ಅಮರನಾಥಕ್ಕೆ ತೆರಳಲು ಸೇವೆ ಆರಂಭವಾಗಿದೆ.
ಅಮರನಾಥ ಮಾರ್ಗದಲ್ಲಿ ಭಾರಿ ಮಳೆ, ಗುಡ್ಡ ಕುಸಿತದಿಂದಾಗಿ ಕಳೆದ ಮೂರು ದಿನಗಳಿಂದ ಅಮರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತಗೊಂಡಿತ್ತು. ಇಂದು ಹವಾಮಾನ ಸುಧಾರಿಸಿದ ಹಿನ್ನೆಲೆಯಲ್ಲಿ ಯಾತ್ರೆ ಮತ್ತೆ ಆರಂಭಗೊಂದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.