ಬೆಂಗಳೂರು: ಬಜೆಟ್ ಮಂಡನೆ ವೇಳೆ ವಿಧಾನಸಭೆಯಲ್ಲಿ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪೀಕರ್ ಯು.ಟಿ. ಖಾದರ್ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಮಹತ್ವದ ಸಭೆ ನಡೆಸಿದ್ದಾರೆ.
ವಿಧಾನಸಭೆ ಕಲಾಪದ ವೇಳೆ ಅಪರಿಚಿತ ವ್ಯಕ್ತಿ ಪ್ರವೇಶ ಮಾಡಿರುವ ಹಿನ್ನೆಲೆಯಲ್ಲಿ ಭದ್ರತಾ ಲೋಪ ವಿಚಾರವಾಗಿ ಸ್ಪೀಕರ್ ಖಾದರ್ ಸಭೆ ನಡೆಸಿದ್ದಾರೆ. ಸಭೆಯಲ್ಲಿ ವಿಧಾನಸೌಧಕ್ಕೆ ಭದ್ರತೆ ಒದಗಿಸಿರುವ ವಿಚಾರವನ್ನು ಚರ್ಚಿಸಲಾಗುತ್ತಿದೆ.
ಪೊಲೀಸ್ ಆಯುಕ್ತ ದಯಾನಂದ್, ಸಿಸಿಬಿ ಜಂಟಿ ಆಯುಕ್ತ ಶರಣಪ್ಪ, ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿ ಸೇರಿದಂತೆ ಹಲವು ಅಧಿಕಾರಿಗಳು ಭಾಗಿಯಾಗಿದ್ದಾರೆ.