HomeKarnatakaBIG NEWS: ಜೈನಮುನಿ ಹತ್ಯೆ ಹಿಂದೆ ಉಗ್ರರ ಕೈವಾಡ ಶಂಕೆ ಎಂದ ಶಾಸಕ; ದಾಖಲೆಗಳಿದ್ದರೆ ಕೊಡಿ...

BIG NEWS: ಜೈನಮುನಿ ಹತ್ಯೆ ಹಿಂದೆ ಉಗ್ರರ ಕೈವಾಡ ಶಂಕೆ ಎಂದ ಶಾಸಕ; ದಾಖಲೆಗಳಿದ್ದರೆ ಕೊಡಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣದ ಹಿಂದೆ ಉಗ್ರರ ಕೈವಾಡ ಶಂಕೆ ಇದೆ ಎಂದು ಬಿಜೆಪಿ ಶಾಸಕ ಸಿದ್ದು ಸವದಿ ಆರೋಪಿಸಿದ್ದು, ಇದಕ್ಕೆ ಪ್ರತಿಕ್ರಿಯಿಸಿರುವ ಸಚಿವ ಪ್ರಿಯಾಂಕ್ ಖರ್ಗೆ, ಅಂತಹ ದಾಖಲೆಗಳಿದ್ದರೆ ಕೊಡಿ ಎಂದಿದ್ದಾರೆ.

ವಿಧಾನಸೌಧದಲ್ಲಿ ಶಾಸಕರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವ ಪ್ರಿಯಾಂಕ್ ಖರ್ಗೆ, ಜೈನಮುನಿ ಹತ್ಯೆ ಹಿಂದೆ ಐಸಿಸ್, ಉಗ್ರರ ಕೈವಾಡವಿದೆ ಎಂಬ ಅನುಮಾನವಿದ್ದರೆ ಅಂತಹ ದಾಖಲೆಗಳಿದ್ದರೆ ಕೊಡಿ. ಸೂಕ್ತ ತನಿಖೆ ನಡೆಸಲು ನಮ್ಮ ಪೊಲೀಸ್ ಇಲಾಖೆ ಸಮರ್ಥವಾಗಿದೆ. ಈ ನಿಟ್ಟಿನಲ್ಲಿ ತನಿಖೆ ನಡೆಯಲಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜೈನಮುನಿ ಹತ್ಯೆ ಹಿಂದೆ ಐಸಿಸ್ ಕೈವಾಡ ಶಂಕೆ ಇದೆ. ಸರ್ಕಾರ ಆರೋಪಿಗಳ ರಕ್ಷಣೆ ಮಾಡುತ್ತಿದೆ. ತನಿಖೆ ನಿಟ್ಟಿನಲ್ಲಿ ಸರ್ಕಾರದ ನಡೆ ಅನುಮಾನಾಸ್ಪದವಾಗಿದೆ ಎಂದು ಶಾಸಕ ಸಿದ್ದು ಸವದಿ ಆರೋಪಿಸಿದ್ದರು.

 

For Latest News Updates, Join Our Whatsapp Community🚩
RELATED ARTICLES

Most Popular