HomeKarnatakaBIGG NEWS : ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ : `ವಿವಾಹಿತ ಮಹಿಳಾ ಅಭ್ಯರ್ಥಿ'ಗಳಿಗೆ ಮಹತ್ವದ...

BIGG NEWS : ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ : `ವಿವಾಹಿತ ಮಹಿಳಾ ಅಭ್ಯರ್ಥಿ’ಗಳಿಗೆ ಮಹತ್ವದ ಮಾಹಿತಿ

ಬೆಂಗಳೂರು : ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಆನ್ ಲೈನ್ ಅರ್ಜಿ ಸಲ್ಲಿಸಿರುವ ವಿವಾಹಿತ ಮಹಿಳಾ ಅಭ್ಯರ್ಥಿಗಳಿಗೆ ಶಾಲಾ ಶಿಕ್ಷಣ ಇಲಾಖೆ ಮಹತ್ವದ ಮಾಹಿತಿ ನೀಡಿದ್ದು, ಮಹಿಳಾ ಅಭ್ಯರ್ಥಿಗಳು ನಮೂದಿಸಿದ ಜಾತಿ ಮತ್ತು ಆಧಾಯ ಪ್ರಮಾಣ ಪತ್ರ (ಗಂಡನ ಆದಾಯ/ತಂದೆಯ ಆದಾಯ ಪ್ರಮಾಣ ಪತ್ರ) ಮಾಹಿತಿ ಸಲ್ಲಿಸುವಂತೆ ಸೂಚನೆ ನೀಡಿದೆ.

ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ-2022(GPTR- 2022)ಕ್ಕೆ ಸಂಬಂಧಿಸಿದಂತೆ 1:2 ಅನುಪಾತದ ಅಭ್ಯರ್ಥಿಗಳ ಮೂಲದಾಖಲೆಗಳ ಪರಿಶೀಲನಾ ವೇಳೆಯಲ್ಲಿ ಆನ್‌ಲೈನ್‌ ಅರ್ಜಿಯಲ್ಲಿ ವಿವಾಹಿತರೆಂದು ನಮೂದಿಸಿ, ಜಾತಿ ಮೀಸಲಾತಿಯನ್ನು ಕ್ಲೇಮು ಮಾಡಿರುವ ವಿವಾಹಿತ ಮಹಿಳಾ ಅಭ್ಯರ್ಥಿಗಳು ತಂದೆಯ/ಪೋಷಕರ ಹೆಸರಿನಲ್ಲಿ ಪಡೆದ ಜಾತಿ ಆದಾಯ ಪ್ರಮಾಣ ಪತ್ರ ಸಲ್ಲಿಸಿದವರು ಅಥವಾ ಪತಿಯ ಆದಾಯ ಪ್ರಮಾಣ ಪತ್ರವನ್ನು ಸಲ್ಲಿಸಿದವರ ಮಾಹಿತಿಯನ್ನು ಈ ಪತ್ರದೊಂದಿಗೆ ಆಯಾ ಜಿಲ್ಲಾ ಉಪನಿರ್ದೇಶಕರು (ಆಡಳಿತ) ಹಾಗೂ ನೇಮಕಾತಿ ಪ್ರಾಧಿಕಾರ ರವರ ಕಛೇರಿಗೆ ಸಿ.ಎ.ಸಿ ಯಿಂದ ಇ-ಮೇಲ್ ಮಾಡಲಾದ ನಮೂನೆ ಮಾಹಿತಿಯನ್ನು ಭರ್ತಿ ಮಾಡಿ ಅತ್ಯಾದ್ಯತೆಯೆಂದು ಪರಿಗಣಿಸಿ ದಿನಾಂಕ:09/07/2023 ಬೆಳಗ್ಗೆ 11.30 ರ ಒಳಗಾಗಿ ತಪ್ಪದೇ ಕಛೇರಿಯ ಇ-ಮೇಲ್ ವಿಳಾಸ [email protected]ಕ್ಕೆ Soft Copy ಮತ್ತು ದೃಢೀಕೃತ ಮಾಹಿತಿಯನ್ನು ಕಳುಹಿಸಲು ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular