ಬೆಂಗಳೂರು : ‘ಜೈನಮುನಿ’ ಹತ್ಯೆ ಪ್ರಕರಣ ಸದನದಲ್ಲಿ ಪ್ರಸ್ತಾಪವಾಗಿದ್ದು, ತನಿಖೆಯನ್ನು ಸಿಬಿಐಗೆ ವಹಿಸಿ ಎಂದು ಸದನದಲ್ಲಿ ಬಿಜೆಪಿ ಶಾಸಕ ಅಭಯ್ ಪಾಟೀಲ್ ಒತ್ತಾಯಿಸಿದರು.
ವಿದ್ಯುತ್ ಶಾಕ್ ಕೊಟ್ಟು ಜೈನಮುನಿಗಳನ್ನು ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣ ರಾಜ್ಯದಲ್ಲಿ ಭಾರಿ ಸುದ್ದಿಯಾಗಿದೆ. ಘಟನೆ ಹಿನ್ನೆಲೆ ಭಾರಿ ಪ್ರತಿಭಟನೆಗಳು ಕೂಡ ನಡೆಯುತ್ತಿದೆ. ಇಂದು ‘ಜೈನಮುನಿ’ ಹತ್ಯೆ ಪ್ರಕರಣ ಸದನದಲ್ಲಿ ಪ್ರಸ್ತಾಪವಾಗಿದ್ದು, ತನಿಖೆಯನ್ನು ಸಿಬಿಐಗೆ ವಹಿಸಿ ಎಂದು ಸದನದಲ್ಲಿ ಬಿಜೆಪಿ ಶಾಸಕ ಅಭಯ್ ಪಾಟೀಲ್ ಒತ್ತಾಯಿಸಿದರು.
ಜೈನಮುನಿಗಳ ಕೊಲೆ ಪ್ರಕರಣ ಹಲವು ಸಂಶಯಗಳಿಗೆ ಎಡೆಮಾಡಿಕೊಟ್ಟಿದೆ. ಪ್ರಕರಣದ ಮೊದಲನೇ ಆರೋಪಿ ಹೆಸರನ್ನು ಮಾತ್ರ ಹೇಳುತ್ತಿದ್ದಾರೆ. ಎರಡನೇ ಆರೋಪಿಯ ಹೆಸರು ಹೇಳಲು ಸಾಧ್ಯವಿಲ್ಲ ಎಂದಿದ್ದಾರೆ. ತನಿಖೆಯನ್ನು ಸಿಬಿಐಗೆ ವಹಿಸಿ ಎಂದು ಸದನದಲ್ಲಿ ಬಿಜೆಪಿ ಶಾಸಕ ಅಭಯ್ ಪಾಟೀಲ್ ಒತ್ತಾಯಿಸಿದರು.