
ಈ ಬಗ್ಗೆ ಟ್ವೀಟ್ ಮಾಡಿರುವ ಚಕ್ರವರ್ತಿ ಸೂಲಿಬೆಲೆ ‘ಸಿದ್ದರಾಮಯ್ಯ 2.0 ತನ್ನ ಕಬಂಧಬಾಹುಗಳನ್ನು ವಿಸ್ತರಿಸುತ್ತಿದೆ. ಹನುಮ ಜಯಂತಿಯ ಸಕ್ರಿಯ ಸಂಘಟಕರಾಗಿದ್ದ ಕಾರಣ ನಾವು ನಿನ್ನೆ ನಮ್ಮ ಸ್ವಯಂಸೇವಕರಲ್ಲಿ ಒಬ್ಬರನ್ನು ಕಳೆದುಕೊಂಡಿದ್ದೇವೆ! ಅವರನ್ನು ಕಾಂಗ್ರೆಸ್ ಬೆಂಬಲಿಗರು ಬರ್ಬರವಾಗಿ ಹತ್ಯೆ ಮಾಡಿದ್ದರು. ಕರ್ನಾಟಕ ಉರಿಯುತ್ತಿದೆ.. ಶೀಘ್ರದಲ್ಲೇ ಮತ್ತೊಂದು ಪಶ್ಚಿಮ ಬಂಗಾಳ ಸಾಕ್ಷಿಯಾಗಲಿದೆ ಎಂದು ಯುವ ಬ್ರಿಗೇಡ್ ಮುಖ್ಯಸ್ಥ ಚಕ್ರವರ್ತಿ ಸೂಲಿಬೆಲೆ ಗಂಭೀರ ಆರೋಪ ಮಾಡಿದ್ದಾರೆ.
Siddaramayya 2.0 expanding its tentacles. We lost one of our volunteers yesterday just because he was an active organiser of Hanuma Jayanti! He was brutally murdered by the supporters of Congress..
Karnataka burning..
Another WB soon to be witnessed..#YuvaBrigade pic.twitter.com/0vMDsdDSZV— Chakravarty Sulibele (@astitvam) July 10, 2023
ಯುವ ಬ್ರಿಗೇಡ್ ಕಾರ್ಯಕರ್ತನ ಹತ್ಯೆ : ಇಬ್ಬರ ಬಂಧನ
ಮೈಸೂರಿನ ಟಿ.ನರಸಿಪುರದಲ್ಲಿ ಯುವ ಬ್ರಿಗೇಡ್ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಕಂಠ ಹಾಗೂ ಸಂದೇಶ್ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ಕುರಿತು ಟಿ ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹನುಮಜಯಂತಿ ದಿನ ಭಾನುವಾರ ರಾತ್ರಿ ಗುಂಪುಘರ್ಷಣೆ ನಡೆದು ದುಷ್ಕರ್ಮಿಗಳು ಯುವಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ಎಂಬಾತನನ್ನು ಬರ್ಬರವಾಗಿ ಕೊಲೆ ಮಾಡಿದ್ದರು. ಟಿ.ನರಸಿಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಂತರ ಪೊಲೀಸರು 6 ಜನರ ವಿರುದ್ಧ ಎಫ್ ಐ ಆರ್ ದಾಖಲಿಸಿದ್ದರು.
ಮೈಸೂರು ಜಿಲ್ಲೆಯ ಟಿ.ನರಸೀಪುರದಲ್ಲಿ ಹನುಮ ಜಯಂತಿ ವೇಳೆ ಗುಂಪು ಘರ್ಷಣೆ ನಡೆದಿದ್ದು, ಈ ವೇಳೆ ಯುವ ಬ್ರಿಗೇಡ್ ಕಾರ್ಯಕರ್ತನನ್ನು ಬರ್ಬರ ಹತ್ಯೆ ಮಾಡಲಾಗಿದೆ.ಟಿ. ನರಸೀಪುರ ಪಟ್ಟಣದಲ್ಲಿ ಹನುಮಜಯಂತಿ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಕ್ಷುಲ್ಲಕ ಕಾರಣಕ್ಕೆ 2 ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಬಳಿಕ ಪಟ್ಟಣದ ಹೊರವಲಯದಲ್ಲಿ ಟಿ.ನರಸೀಪುರ ಪಟ್ಟಣದ ಶ್ರೀರಾಂಪುರ ಕಾಲೋನಿ ನಿವಾಸಿ ವೇಣುಗೋಪಾಲ್ ನಾಯಕ್ (32) ಹತ್ಯೆ ಮಾಡಲಾಗಿದೆ.ಹನುಮ ಜಯಂತಿ ವೇಳೆ ಎರಡು ಗುಂಪುಗಳ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದಿದೆ.

